ಒಬೆರಾಯ್ ಟ್ವೀಟ್ ವಿವಾದ: ನೋಟಿಸ್
Team Udayavani, May 21, 2019, 6:25 AM IST
ಲೋಕಸಭೆ ಚುನಾವಣೆ ಕುರಿತು ಟ್ವೀಟ್ ಮಾಡುವ ವೇಳೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗಿದ್ದ ಸಂಬಂಧಗಳ ಕುರಿತು ಮೀಮ್ ರಚಿಸುವ ಮೂಲಕ ಬಾಲಿವುಡ್ ನಟ ವಿವೇಕ್ ಒಬೆರಾಯ್ ಕೀಳು ಅಭಿರುಚಿಯನ್ನು ಪ್ರದರ್ಶಿಸಿದ್ದಾರೆ. ಅವರ ಟ್ವೀಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅಲ್ಲದೆ ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರು ಒಬೆರಾಯ್‌ಗೆ ನೋಟಿಸ್ ಕೂಡ ಜಾರಿ ಮಾಡಿದ್ದಾರೆ.
ಟ್ವೀಟ್‌ನಲ್ಲಿ ಒಬೆರಾಯ್ 3 ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಮೊದಲ ಫೋಟೋದಲ್ಲಿ ಐಶ್ವರ್ಯಾ ರೈ ಮತ್ತು ಸಲ್ಮಾನ್ ಜತೆಗಿದ್ದರೆ, ಎರಡನೇ ಚಿತ್ರದಲ್ಲಿ ಐಶ್ವರ್ಯಾ ವಿವೇಕ್ ಒಬೆರಾಯ್ ಜತೆಗಿದ್ದಾರೆ. ಮೂರನೇ ಫೋಟೋದಲ್ಲಿ ಐಶ್ ತಮ್ಮ ಪತಿ ಅಭಿಷೇಕ್ ಮತ್ತು ಪುತ್ರಿ ಆರಾಧ್ಯಾ ಜತೆಗಿದ್ದಾರೆ. ಬಳಿಕ ಮೂರೂ ಫೋಟೋಗಳಿಗೂ ಕ್ರಮವಾಗಿ “ಜನಾಭಿಪ್ರಾಯ’, “ಮತಗಟ್ಟೆ ಸಮೀಕ್ಷೆ’ ಮತ್ತು “ಫಲಿತಾಂಶ’ ಎಂದು ಶೀರ್ಷಿಕೆ ಬರೆಯಲಾಗಿದೆ.
ಒಬೆರಾಯ್ ಅವರ ಈ ಟ್ವೀಟ್‌ಗೆ ಸೆಲೆಬ್ರಿಟಿಗಳಾದ ಸೋನಂ ಕಪೂರ್, ಊರ್ಮಿಳಾ ಮಾತೋಂಡ್ಕರ್, ಜ್ವಾಲಾ ಗುಟ್ಟಾ ಮಾತ್ರ ವಲ್ಲದೆ, ರಾಷ್ಟ್ರೀಯ ಮಹಿಳಾ ಆಯೋಗ, ಮಹಾರಾಷ್ಟ್ರ ಮಹಿಳಾ ಆಯೋಗ, ದಿಲ್ಲಿ ಮಹಿಳಾ ಆಯೋಗ ಕೂಡ ಆಕ್ರೋಶ ವ್ಯಕ್ತಪಡಿಸಿದೆ. ಚುನಾವಣೆಯನ್ನು ಮಹಿಳೆಯೊಬ್ಬರ ವೈಯಕ್ತಿಕ ಬದುಕಿಗೆ ಹೋಲಿಕೆ ಮಾಡಿದ್ದಕ್ಕೆ ಹಾಗೂ ಈ ವಿಚಾರದಲ್ಲಿ ಇನ್ನೂ ಅಪ್ರಾಪ್ತಳಾದ ಆರಾಧ್ಯಳನ್ನು ಬಳಸಿಕೊಂಡಿದ್ದಕ್ಕೆ ಟೀಕೆಗಳು ಕೇಳಿಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.