ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸುವುದಿಲ್ಲ: ಹರ್ಯಾಣ ಸಿಎಂ ಖಟ್ಟರ್
Team Udayavani, Dec 11, 2021, 2:46 PM IST
ಗುರುಗ್ರಾಮ: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಸಮಸ್ಯೆಯನ್ನು ಪರಿಹರಿಸಲು ನಾನು ಪೊಲೀಸರಿಗೆ ಹೇಳಿದ್ದೇನೆ, ಜನರು ನಿಗದಿತ ಸ್ಥಳಗಳಲ್ಲಿ ನಮಾಜ್ ಅಥವಾ ಪೂಜೆ ಸಲ್ಲಿಸಲು ಯಾವುದೇ ತೊಂದರೆ ಇಲ್ಲ. ಅದಕ್ಕಾಗಿಯೇ ಧಾರ್ಮಿಕ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಆದರೆ ತೆರೆದ ಜಾಗದಲ್ಲಿ ನಮಾಜ್ ಮಾಡುವ ಕ್ರಮವನ್ನು ಸಹಿಸುವುದಿಲ್ಲ. ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗುವುದು” ಎಂದರು.
ತಮ್ಮ ಬಳಿ ಕೆಲವು ಜಮೀನುಗಳಿದ್ದು, ಅಲ್ಲಿ ಅನುಮತಿ ನೀಡಬೇಕು ಎಂದು ಅವರು ಹೇಳಿದ್ದಾರೆ. ವಕ್ಫ್ ನ ಯಾವುದಾದರೂ ಜಮೀನು ಅತಿಕ್ರಮಣಕ್ಕೆ ಒಳಗಾಗಿದ್ದರೆ ಅದನ್ನು ಲಭ್ಯವಾಗುವಂತೆ ನೋಡಿಕೊಳ್ಳುತ್ತೇವೆ. ಜನರು ತಮ್ಮ ಮನೆಗಳಲ್ಲಿ ನಮಾಜ್ ಮಾಡಬಹುದು. ಆದರೆ ತೆರೆದ ಸ್ಥಳಗಳಲ್ಲಿ ಇದನ್ನು ಮಾಡುವುದರಿಂದ ಘರ್ಷಣೆಗಳು ಉಂಟಾಗಬಹುದು. ಜನರ ಹಕ್ಕುಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಆದರೆ ಬಲವಂತವಾಗಿ ಏನನ್ನಾದರೂ ಮಾಡುವುದನ್ನು ಸಹಿಸಲಾಗುವುದಿಲ್ಲ” ಎಂದು ಹರ್ಯಾಣ ಸಿಎಂ ಹೇಳಿದರು.
ಇದನ್ನೂ ಓದಿ:ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಜೈಲಿನ ಮಹಡಿಯಿಂದ ಬಿದ್ದು ಸಾವು!
ನವೆಂಬರ್‌ನಲ್ಲಿ ಗುರುಗ್ರಾಮ್ ಆಡಳಿತವು 37 ಗೊತ್ತುಪಡಿಸಿದ ಜಾಗಗಳಲ್ಲಿ ಎಂಟರಲ್ಲಿ ನಮಾಜ್ ಮಾಡಲು ಅನುಮತಿಯನ್ನು ಹಿಂಪಡೆದಿತ್ತು. ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಆಕ್ಷೇಪಣೆಯ ನಂತರ ಅನುಮತಿಯನ್ನು ರದ್ದುಗೊಳಿಸಲಾಗಿದೆ.
ಗುರುಗ್ರಾಮದಲ್ಲಿ ಶುಕ್ರವಾರ ನಮಾಝ್ ಅನ್ನು ತೆರೆದ ಸ್ಥಳಗಳಲ್ಲಿ ನಡೆಸುವ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಸ್ಲಿಂ ರಾಷ್ಟ್ರೀಯ ವೇದಿಕೆ ಮತ್ತು ಗುರುಗ್ರಾಮ ಇಮಾಮ್ ಸಂಘಟನೆಯ ಧರ್ಮಗುರುಗಳು ಜಿಲ್ಲಾಡಳಿತಕ್ಕೆ ಕೆಲವು ದಿನಗಳ ಹಿಂದೆ ಸಲ್ಲಿಸಿದ ಜ್ಞಾಪನಾ ಪತ್ರದಲ್ಲಿ ಶುಕ್ರವಾರದ ನಮಾಜ್ 12 ಸ್ಥಳಗಳಲ್ಲಿ ನಡೆಯಲಿದೆ. ಯಾರಾದರೂ ಅಡ್ಡಿಪಡಿಸಿದರೆ ಮುಸ್ಲಿಮ್ ನ್ಯಾಷನಲ್ ಫೋರಂ ಮತ್ತು ಇಮಾಮ್ ಆರ್ಗನೈಸೇಶನ್ ಅದನ್ನು ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಮಸೀದಿ, ಮದರಸಾಗಳು ಮತ್ತು ವಕ್ಫ್ ಬೋರ್ಡ್‌ನ ಭೂಮಿ ಮೇಲಿನ ಅತಿಕ್ರಮಣಗಳನ್ನು ತೆಗೆದುಹಾಕಲು ನಾವು ಆಡಳಿತಕ್ಕೆ ಮನವಿ ಮಾಡಿದ್ದೇವೆ, ಇದರಿಂದ ನಮಾಜ್ ಶಾಂತಿಯುತವಾಗಿ ಸಲ್ಲಿಸಬಹುದು ಎಂದು ಮುಸ್ಲಿಂ ರಾಷ್ಟ್ರೀಯ ವೇದಿಕೆಯ ಸಂಚಾಲಕ ಖುರ್ಷಿದ್ ರಜಾಕಾ ಐಎಎನ್‌ಎಸ್‌ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.