mobileಗಾಗಿ ಜಲಾಶಯದಿಂದ 3 ದಿನಗಳ ಕಾಲ ನೀರನ್ನು ಪಂಪ್ ಮಾಡಿದ ಅಧಿಕಾರಿ!

1 ಲಕ್ಷ ರೂ. ಮೌಲ್ಯದ ಸ್ಮಾರ್ಟ್‌ಫೋನ್... 21 ಲಕ್ಷ ಲೀಟರ್ ನೀರು ಖಾಲಿ...!!!

Team Udayavani, May 26, 2023, 2:29 PM IST

1-csadsad

ರಾಯ್ ಪುರ : ಛತ್ತೀಸ್‌ಗಢದಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ, ಸರಕಾರಿ ಅಧಿಕಾರಿಯೊಬ್ಬ ಜಲಾಶಯದಲ್ಲಿ ಬಿದ್ದಿದ್ದ ತನ್ನ ದುಬಾರಿ ಮೊಬೈಲ್ ಫೋನ್ ಅನ್ನು ಮರುಪಡೆಯಲು ಜಲಾಶಯದಿಂದ 21 ಲಕ್ಷ ಲೀಟರ್ ನೀರನ್ನು ಖಾಲಿ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್‌ನ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು ಖೇರ್ಕಟ್ಟಾ ಅಣೆಕಟ್ಟಿನಲ್ಲಿ ರಜೆಯನ್ನು ಆನಂದಿಸುತ್ತಿದ್ದಾಗ ಆಕಸ್ಮಿಕವಾಗಿ 1 ಲಕ್ಷ ರೂ. ಮೌಲ್ಯದ ಸ್ಮಾರ್ಟ್‌ಫೋನ್ 15 ಅಡಿ ಆಳದ ನೀರಿನಿಂದ ತುಂಬಿರುವ ಪ್ರದೇಶದಲ್ಲಿ ಬೀಳಿಸಿದ್ದಾರೆ. ನಂತರ ಸ್ಥಳೀಯರು ಧುಮುಕಿದರೂ ಹೊರತೆಗೆಯುವ ಪ್ರಯತ್ನ ವಿಫಲವಾಯಿತು.

ಅಧಿಕಾರಿಯು ಮೂರು ದಿನಗಳ ಕಾಲ ನಿರಂತರವಾಗಿ ಎರಡು 30hp ಡೀಸೆಲ್ ಪಂಪ್‌ಗಳನ್ನು ಬಳಸಿ 21 ಲಕ್ಷ ಲೀಟರ್ ನೀರನ್ನು ಖಾಲಿ ಮಾಡಿದ್ದಾರೆ. ನೀರು 1,500 ಎಕರೆ ಕೃಷಿ ಭೂಮಿಗೆ ನೀರುಣಿಸಲು ಸಾಕಾಗುತ್ತದೆ ಎಂದು ಹೇಳಲಾಗಿದೆ.

ಸೋಮವಾರ ಸಂಜೆಯಿಂದ ಪಂಪ್‌ಗಳು ನೀರನ್ನು ಹಾರಿಸಲಾರಂಭಿಸಿದವು ಮತ್ತು ಗುರುವಾರದವರೆಗೆ ಕಾರ್ಯನಿರ್ವಹಿಸಿದವು. ದೂರಿನ ಮೇರೆಗೆ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಡೆದಿದ್ದಾರೆ. ಆದರೆ, ಆರು ಅಡಿ ಆಳದವರೆಗೆ ಅಂದರೆ ಸುಮಾರು 21 ಲಕ್ಷ ಲೀಟರ್ ನೀರನ್ನು ಅದಾಗಲೇ ಪಂಪ್ ಮಾಡಲಾಗಿತ್ತು. ಪ್ರದೇಶವು ಬೇಸಿಗೆಯಲ್ಲಿಯೂ ಸಹ 10 ಅಡಿ ಆಳದ ನೀರನ್ನು ಹೊಂದಿರುತ್ತದೆ ಮತ್ತು ಪ್ರಾಣಿಗಳು ಇದನ್ನು ಹೆಚ್ಚಾಗಿ ಕುಡಿಯುತ್ತವೆ ಎಂದು ತಿಳಿದು ಬಂದಿದೆ.

ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದು, ಸ್ಥಳೀಯ ಉಪವಿಭಾಗಾಧಿಕಾರಿಯಿಂದ ಪೂರ್ವ ಮೌಖಿಕ ಅನುಮತಿಯನ್ನು ಪಡೆದಿದ್ದೆ ಎಂದು ರಾಜೇಶ್ ವಿಶ್ವಾಸ್ ಹೇಳಿದ್ದಾರೆ.

ಆಳವಾದ ನೀರಿನಲ್ಲಿ ಮೂರು ದಿನಗಳ ಕಾಲ ಮುಳುಗಿದ್ದ ಫೋನ್ ಈಗ ಕಾರ್ಯನಿರ್ವಹಿಸುತ್ತಿಲ್ಲ. ಘಟನೆ ಕುರಿತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ರಮಣ್ ಸಿಂಗ್ ಅವರು ಸಿಎಂ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದು “ಸರ್ವಾಧಿಕಾರಿ” ರಾಜ್ಯ ಸರ್ಕಾರದ ಅಡಿಯಲ್ಲಿ ಅಧಿಕಾರಿಗಳು ಈ ಪ್ರದೇಶವನ್ನು ತಮ್ಮ ಪೂರ್ವಜರ ಆಸ್ತಿ ಎಂದು ಪರಿಗಣಿಸುತ್ತಿದ್ದಾರೆ. ವಿಪರೀತ ಬಿಸಿಲಿನಲ್ಲಿ ಜನರು ನೀರಿನ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದಾರೆ ಮತ್ತು ಅಧಿಕಾರಿಯೊಬ್ಬರು 21 ಲಕ್ಷ ಲೀಟರ್ ನೀರನ್ನು ಹರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಪತ್ರಕರ್ತರು ಪ್ರಶ್ನಿಸಿದಾಗ, ರಾಜ್ಯ ಕ್ಯಾಬಿನೆಟ್ ಸಚಿವ ಅಮರಜೀತ್ ಭಗತ್ ಅವರು ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಘಟನೆಯನ್ನು ನಾನು ಖಂಡಿತವಾಗಿ ಗಮನಿಸುತ್ತೇನೆ ಮತ್ತು ಸತ್ಯಾಸತ್ಯತೆಯ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.