“ಯುಪಿಎಸ್‌ಸಿ ಅಧಿಕಾರಿಗಳು ಬಹುತೇಕ ಡಕಾಯಿತರು’! Union Minister Bisheswar Tudu
Team Udayavani, Apr 11, 2023, 6:55 AM IST
ನವದೆಹಲಿ: ಕೇಂದ್ರ ನಾಗರಿಕ ಸೇವಾ ಆಯೋಗ(ಯುಪಿಎಸ್‌ಸಿ)ದ ವತಿಯಿಂದ ಸರ್ಕಾರಿ ಹುದ್ದೆಗಳಿಗೆ ನೇಮಕಗೊಳ್ಳುವ ಬಹುತೇಕ ಅಧಿಕಾರಿಗಳು “ಡಕಾಯಿತರು’ ಎಂದು ಹೇಳುವ ಮೂಲಕ ಬಿಜೆಪಿ ನಾಯಕ, ಕೇಂದ್ರ ಸಚಿವ ಬಿಶ್ವೇಶ್ವರ ಟುಡು ವಿವಾದ ಸೃಷ್ಟಿಸಿದ್ದಾರೆ.
ಕೇಂದ್ರ ಬುಡಕಟ್ಟು ಹಾಗೂ ಜಲಕಶಕ್ತಿ ಖಾತೆ ಸಹಾಯಕ ಸಚಿವರಾದ ಟುಡು, ಒಡಿಶಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, “ಯುಪಿಎಸ್‌ಸಿ ಮೂಲಕ ನೇಮಕಗೊಳ್ಳುವವರು ಭಾರೀ ಬುದ್ಧಿವಂತರು ಮತ್ತು ಸದಾ ಉನ್ನತ ಸ್ಥಾನದಲ್ಲಿರುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ನನಗೆ ಈಗ ಅರ್ಥವಾಗುತ್ತಿದೆ. ಅವರಲ್ಲಿ ಬಹುತೇಕರು ಡಕಾಯಿತರಾಗಿರುತ್ತಾರೆ. ಎಲ್ಲರೂ ಡಕಾಯಿತರೆಂದು ಹೇಳುತ್ತಿಲ್ಲ, ಆದರೆ ಬಹುತೇಕರು ಅಂಥವರೇ. ಚಿಕನ್ ಕದಿಯುವ ಒಬ್ಬ ವ್ಯಕ್ತಿಗೆ ಶಿಕ್ಷೆಯಾಗುತ್ತದೆ. ಆದರೆ, ಮಿನರಲ್ ಮಾಫಿಯಾ ನಡೆಸುವ ಅಧಿಕಾರಿಯನ್ನು ಶಿಕ್ಷೆ ಇರಲಿ, ಮುಟ್ಟಲೂ ಸಾಧ್ಯವಾಗುವುದಿಲ್ಲ. ಆ ರೀತಿ ವ್ಯವಸ್ಥೆ ಅವರನ್ನು ರಕ್ಷಿಸುತ್ತಿರುತ್ತದೆ. ವಿದ್ಯಾವಂತರಿದ್ದರೂ ನಮ್ಮ ದೇಶದಲ್ಲಿ ಭ್ರಷ್ಟಾಚಾರವಿರಲು ಇದೇ ಕಾರಣ. ನಮಗೆ ಅಧ್ಯಾತ್ಮಿಕ ಶಿಕ್ಷಣ ಮತ್ತು ಆಲೋಚನೆಗಳ ಕೊರತೆ ಇದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.