ದಿಲ್ಲಿ ಸಿಎಸ್‌ನಂಥ ಅಧಿಕಾರಿಗಳಿಗೆ ಹೊಡೆಯುವುದೇ ಸರಿ: ಆಪ್ ಶಾಸಕ
Team Udayavani, Feb 23, 2018, 5:10 PM IST
ಹೊಸದಿಲ್ಲಿ : ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಮೇಲೆ ಆಪ್ ಶಾಸಕರು ನಡೆಸಿದ ಹಲ್ಲೆ ಪ್ರಕರಣ ಇನ್ನೂ ಜೀವಂತ ಇರುವಾಗಲೇ ಆಮ್ ಆದ್ಮಿ ಪಕ್ಷದ ಶಾಸಕ ನರೇಶ್ ಬಲ್ಯಾನ್ ಅವರು, “ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರಂತಹ ಅಧಿಕಾರಿಗಳು ಹೊಡೆಸಿಕೊಳ್ಳುವುದಕ್ಕೆ ಯೋಗ್ಯರು’ ಎಂದು ಹೇಳುವ ಮೂಲಕ ಇನ್ನೊಂದು ವಿವಾದ ಸೃಷ್ಟಿಸಿದ್ದಾರೆ.
ಉತ್ತಮ್ ನಗರದಲ್ಲಿ ನಡೆದ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಆಪ್ ಶಾಸಕ ಬಲ್ಯಾನ್, “ದಿಲ್ಲಿ ಮುಖ್ಯ ಕಾರ್ಯದರ್ಶಿಗಳು ನಮ್ಮ ವಿರುದ್ಧ ಹಲ್ಲೆಯ ಸುಳ್ಳು ಆರೋಪ ಹೊರಿಸಿದ್ದಾರೆ; ನಾನು ಹೇಳುತ್ತೇನೆ ಜರ್ವಾಲ್ ಅವರಂತಹ ಅಧಿಕಾರಿಗಳಿಗೆ ಹೊಡೆಯುವುದೇ ಸರಿ; ಸಾಮಾನ್ಯ ಜನರಿಗೆ ಆಗಬೇಕಿರುವ ಕೆಲಸಗಳನ್ನು ತಡೆಯುವ ಅಧಿಕಾರಿಗೆ ಹೊಡೆಯಲೇ ಬೇಕಾಗುತ್ತದೆ’ ಎಂದು ಹೇಳಿದರು.
#WATCH: While addressing a rally in Uttam Nagar, AAP MLA Naresh Balyan says, ‘jo Chief Secy ke sath hua, jo inhone jhootha aarop lagaya, main to keh raha hu aise adhikariyo ko thokna chahye, jo aam aadmi ke kaam rok ke baithe hain aise adhikariyo ke sath yahi salook hona chahye.’ pic.twitter.com/BDamX7TJGe
— ANI (@ANI) February 23, 2018
ಈ ನಡುವೆ ದಿಲ್ಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಅಮಾನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಎಂಬ ಇಬ್ಬರು ಆಪ್ ಶಾಸಕರಿಗೆ ದಿಲ್ಲಿ ನ್ಯಾಯಾಲಯ ಬೇಲ್ ನಿರಾಕರಿಸಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಶೆಫಾಲಿ ಬರ್ನಾಲಾ ಟಂಡನ್ ಅವರು ಬಂಧಿತ ಆಪ್ ಶಾಸಕರಿಗೆ ಬೇಲ್ ನಿರಾಕರಿಸಿದರೂ, ಪೊಲೀಸ್ ಕಸ್ಟಡಿಯಲ್ಲಿ ಅವರನ್ನು ಪ್ರಶ್ನಿಸುವುದಕ್ಕೆ ಯಾವುದೇ ಹೊಸ ಕಾರಣಗಳು ಇಲ್ಲದಿರುವುದರಿಂದ ಅವರನ್ನು ಕಸ್ಟಡಿಗೆ ಒಪ್ಪಿಸಲು ನಿರಾಕರಿಸಿದರು.
ನ್ಯಾಯಾಲಯವು ಆಪ್ ಶಾಸಕರಿಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.