ಗುಜರಾತ್, ಮಹಾರಾಷ್ಟ್ರದಲ್ಲಿ ತೈಲ ವ್ಯಾಟ್ ಶೇ.4ರಷ್ಟು ಇಳಿಕೆ
Team Udayavani, Oct 11, 2017, 7:00 AM IST
ಗಾಂಧಿನಗರ/ಮುಂಬೈ: ಗುಜರಾತ್, ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಪ್ರಮಾಣವನ್ನು ಶೇ.4ರಷ್ಟು ಇಳಿಕೆ ಮಾಡಿವೆ. ಈ ಮೂಲಕ ಎನ್ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳು ಆಡಳಿತದಲ್ಲಿರುವ ರಾಜ್ಯ ಸರ್ಕಾರಗಳು ಇದೇ ಕ್ರಮ ಅನುಸರಿಸುವಂಥ ಪರಿಸ್ಥಿತಿಯನ್ನು ತಂದಿಟ್ಟಿವೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿತ್ತು.
ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್ನಲ್ಲಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಶೇ.4ರಷ್ಟು ಇಳಿಕೆ ಮಾಡಿದೆ.ಇದರಿಂದಾಗಿ ಇಲ್ಲಿ ಪೆಟ್ರೋಲ್ ದರ ಲೀ.ಗೆ 2.93 ಪೈಸೆ, ಡೀಸೆಲ್ ದರ 2.72 ಪೈಸೆ ಇಳಿಕೆ ಯಾಗಲಿದೆ. ಮಹಾರಾಷ್ಟ್ರ ಸರ್ಕಾರ ಕೂಡ ವ್ಯಾಟ್ ಇಳಿಕೆ ಮಾಡಿದ್ದರಿಂದ ಪೆಟ್ರೋಲ್ 2 ರೂ., ಡೀಸೆಲ್ ದರ 1 ರೂ. ಕಡಿಮೆಯಾಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ಶಕ್ತಿಸಿನ್ಹ ಗೋಹಿಲ್, ಚುನಾವಣೆ ಹಿನ್ನೆಲೆಯಲ್ಲಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.