ಕಚ್ಚಾ ತೈಲೋತ್ಪಾದನೆ ವೃದ್ಧಿಗೆ ಅಸ್ತು: ತೈಲ ದರ ಇಳಿಕೆ?
Team Udayavani, Jun 23, 2018, 6:00 AM IST
ವಿಯೆನ್ನಾ: ಮುಂದಿನ ತಿಂಗಳಿನಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾದರೂ ಅಚ್ಚರಿ ಇಲ್ಲ. ತೈಲೋತ್ಪಾದಕ ರಾಷ್ಟ್ರಗಳ ಒಕ್ಕೂಟ (ಒಪೆಕ್) ಶುಕ್ರವಾರ ನಡೆಸಿದ ಸಭೆಯಲ್ಲಿ ಕಚ್ಚಾ ತೈಲ ಉತ್ಪಾದನೆಯ ಪ್ರಮಾಣವನ್ನು ಜು.1ರಿಂದ ಪ್ರತಿ ದಿನ 10 ಲಕ್ಷ ಬ್ಯಾರೆಲ್‌ಗೆ ಹೆಚ್ಚಿಸಲು ಒಪ್ಪಿಕೊಂಡಿವೆ. ಅದಕ್ಕೆ ರಷ್ಯಾ ಕೂಡ ಸಹಮತ ವ್ಯಕ್ತಪಡಿಸಿದೆ.
ಭಾರತ ಈ ಬಗ್ಗೆ ಒಪೆಕ್ ರಾಷ್ಟ್ರಗಳ ಮೇಲೆ ಭಾರಿ ಒತ್ತಡ ಹೇರಿತ್ತು. ಅದಕ್ಕೆ ಅಮೆರಿಕ ಮತ್ತು ಚೀನಾ ಬೆಂಬಲ ನೀಡಿದ್ದವು. ಮೂರನೇ ಅತಿ ದೊಡ್ಡ ಕಚ್ಚಾ ತೈಲ ಉತ್ಪಾದಕ ರಾಷ್ಟ್ರ ಇರಾನ್ ಅಸಮ್ಮತಿ ಸೂಚಿಸಿದರೂ, ಸೌದಿ ಅರೇಬಿಯಾ ಈ ಬಗ್ಗೆ ಮನವೊಲಿಕೆಯಲ್ಲಿ ಯಶಸ್ವಿಯಾಗಿದೆ.
ಇನ್ನು ಭಾರತದ ಮೇಲಾಗುವ ಪರಿಣಾಮದ ಬಗ್ಗೆ ಹೇಳುವುದಾದರೆ, ಇತ್ತೀಚಿನ ದಿನಗಳಲ್ಲಿ ತೈಲೋತ್ಪನ್ನಗಳ ದರ ಏರಿಕೆ ಭಾರಿ ಟೀಕೆಗೆ ಕಾರಣವಾಗಿತ್ತು.
ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಉತ್ಪಾದನೆಯಾಗುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರ ಇಳಿಕೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿ ಲೀ. ಪೆಟ್ರೋಲ್ ದರ 77.25 ರೂ. ಡೀಸೆಲ್‌ಗೆ 68.87 ರೂ. ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Supreme Court: ಮಸೀದಿ ಆವರಣದೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.