‘ಕೈ’ ಬಿಟ್ಟೇ ಲೋಕಪಾಲ ನೇಮಿಸಿ
Team Udayavani, Apr 28, 2017, 2:09 AM IST
ಹೊಸದಿಲ್ಲಿ: ‘ಪ್ರತಿಪಕ್ಷ ನಾಯಕ ಲೋಕಪಾಲ ಆಯ್ಕೆ ಸಮಿತಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ವಿಳಂಬ ಸಲ್ಲದು. ಪ್ರತಿಪಕ್ಷ ನಾಯಕನನ್ನು ಬಿಟ್ಟೇ ಲೋಕಪಾಲರನ್ನು ನೇಮಿಸಿ.’ ಹೀಗೆಂದು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಗುರುವಾರ ಲೋಕಪಾಲರ ನೇಮಕಕ್ಕೆ ವಿಳಂಬ ಮಾಡುತ್ತಿರುವ ಕೇಂದ್ರದ ವಿರುದ್ಧ ಹರಿಹಾಯ್ದಿರುವ ನ್ಯಾಯಾಲಯ, ‘ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ 2013 ಸಮರ್ಥವಾಗಿದ್ದು, ಅವುಗಳ ಕಾರ್ಯನಿರ್ವಹಣೆಗೆ ತಡೆಯೊಡ್ಡಿರುವುದು ಸಮರ್ಥನೀ ಯವಲ್ಲ. ಪ್ರತಿಪಕ್ಷ ನಾಯಕನಿಲ್ಲದಿದ್ದರೆ ಏನಾಯಿತು? ಅವರಿಲ್ಲ ಎನ್ನುವುದು ನೇಮಕ ವಿಳಂಬ ಮಾಡಲು ಹೇಳುವ ಸರಿಯಾದ ಕಾರಣವಲ್ಲ,’ ಎಂದಿದೆ. ಈ ಮೂಲಕ, ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಹೊರತಾಗಿಯೇ ಲೋಕಪಾಲರ ಆಯ್ಕೆಗೆ ನ್ಯಾಯಾಲಯದಿಂದ ಸಮ್ಮತಿ ನೀಡಿದೆ. ದೇಶದಲ್ಲಿ ಲೋಕಪಾಲರ ಆಯ್ಕೆಯನ್ನು ತ್ವರಿತಗೊಳಿಸುವಂತೆ ಕೋರಿ ಎನ್‌ಜಿಒ ಕಾಮನ್‌ಕಾಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಕಳೆದ ನವೆಂಬರ್‌ನಲ್ಲೂ ಕೇಂದ್ರಸರಕಾರದ ವಿರುದ್ಧ ಕಿಡಿಕಾರಿದ್ದ ಸುಪ್ರೀಂ, ಲೋಕ ಪಾಲ ಕಾನೂನನ್ನು ನಿರ್ಜೀವ ಕಾಗದವಾಗಿ ಉಳಿಯಲು ಬಿಡುವುದಿಲ್ಲ ಎಂದು ಖಾರವಾಗಿ ನುಡಿದಿತ್ತು. ಇದೇ ವೇಳೆ, ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ನ್ಯಾಯವಾದಿ ಪ್ರಶಾಂತ್ ಭೂಷಣ್, ‘3 ವರ್ಷಗಳಿಂದ ಸರಕಾರ ನೆಪ ಹೇಳುತ್ತಾ ಬಂದಿತ್ತು. ಈಗ ನ್ಯಾಯಾಲಯವು ಆ ಎಲ್ಲ ನೆಪಗಳನ್ನು ತಿರಸ್ಕರಿಸಿ, ಲೋಕಪಾಲರ ನೇಮಕ ಮಾಡದ್ದಕ್ಕೆ ಕಾರಣಗಳೇ ಇಲ್ಲ ಎಂದು ಹೇಳಿರುವುದು ಸಂತಸದ ಸಂಗತಿ,’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ
Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.