BJPಯಿಂದ ಕುದುರೆ ವ್ಯಾಪಾರ, ಪಕ್ಷ ವಿಭಜನೆ: ಉಮರ್‌ ಅಬ್ದುಲ್ಲ ಶಂಕೆ


Team Udayavani, Jun 21, 2018, 11:14 AM IST

omar-abdullah-600.jpg

ಶ್ರೀನಗರ : ‘ರಾಜಕೀಯ ಲಾಭಕ್ಕಾಗಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿನ ಇತರ ಪಕ್ಷಗಳನ್ನು ಒಡೆಯಲು ಪ್ರಯತ್ನಿಸುತ್ತಿದೆ’ ಎಂದು ನ್ಯಾಶನಲ್‌ ಕಾನ್ಫರೆನ್ಸ್‌ ನಾಯಕ ಹಾಗೂ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವೀ,ದರ್‌ ಗುಪ್ತಾ ಅವರು ನಿನ್ನೆ “ನಾವು ಏನನ್ನೋ ಮಾಡಲು ಹೊರಟಿದ್ದೇವೆ; ರಾಜ್ಯದ ಜನರು ಅದೇನೆಂಬುದನ್ನು ಬೇಗನೆ ತಿಳಿಯಲಿದ್ದಾರೆ’ ಎಂದು ಹೇಳಿದ್ದರು. 

ಇದಕ್ಕೆ ಪ್ರತಿಕ್ರಿಯೆ ಎಂಬಂತೆ  ಉಮರ್‌ ಅಬ್ದುಲ್ಲ ಅವರು “ಬಿಜೆಪಿ ರಾಜ್ಯದಲ್ಲಿ ಹೊಸ ಸರಕಾರ ರಚಿಸುವ ನಿಟ್ಟಿನಲ್ಲಿ ಕುದುರೆ ವ್ಯಾಪಾರಕ್ಕೆ ಇಳಿಯುವಂತೆ ತೋರಿಬರುತ್ತಿದೆ; ರಾಜ್ಯದ ಇತರ ಪಕ್ಷಗಳನ್ನು ಒಡೆಯುವ ಹುನ್ನಾರ ಅದು ನಡೆಸುತ್ತಿದೆ” ಎಂದು ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಗೆ ಬಂದ ಒಂದು ದಿನದ ತರುವಾಯ ಹೇಳಿದರು. 

ಆದರೆ ಕವೀಂದರ್‌ ಗುಪ್ತಾ ಅವರು ಮುಂದುವರಿದು, ‘ರಾಜ್ಯದಲ್ಲಿ ಸದ್ಯೋಭವಿಷ್ಯದಲ್ಲಿ ಯಾವುದೇ ಹೊಸ ಸರಕಾರ ರಚನೆಯಾದೀತೆಂದು ನಾನು ಭಾವಿಸುವುದಿಲ್ಲ; ಈಗ ತುಂಬ ಅನಿಶ್ಚಿತತೆ ಇದೆ; ಆದರೆ ನಾವು ಏನೋ ಒಂದು ಲೆಕ್ಕಾಚಾರಲ್ಲಿ ಇದ್ದೇವೆ; ಜನರು ಅದೇನೆಂಬುದನ್ನು ಶೀಘ್ರವೇ ತಿಳಿಯಲಿದ್ದಾರೆ’ ಎಂದು ಹೇಳಿದ್ದರು. 

ಈ ಹೇಳಿಕೆಗಾಗಿ  ಗುಪ್ತಾ ಮತ್ತು ಅವರ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಎನ್‌ಸಿ ನಾಯಕ, “ಏನನ್ನೋ ಮಾಡಲು ಹೊರಟಿದ್ದೇವೆ ಎಂಬುದರ ಅರ್ಥವೇನು ? ಇತರ ಪಕ್ಷಗಳನ್ನು ಒಡೆದು ಹೊಸ ಸರಕಾರ ರಚಿಸಲು ಅವಶ್ಯವಿರುವ ನಂಬರ್‌ ತಯಾರು ಮಾಡುವುದಲ್ಲದೇ ನಿಮ್ಮ ಹೇಳಿಕೆಗೆ ಬೇರೆ ಏನು ಅರ್ಥವಿದೆ; ಮಾಜಿ ಉಪ ಮುಖ್ಯಮಂತ್ರಿ ಅವರು ರಾಜ್ಯದ ರಾಜಕೀಯ ರಂಗದಲ್ಲಿ  ಅಲ್ಲಸಲ್ಲದ್ದನ್ನು ಮಾಡಲು ಹೊರಟಿದ್ದಾರೆಯೇ ?’ ಎಂದು ಉಮರ್‌ ಅಬ್ದುಲ್ಲ ಪ್ರಶ್ನಿಸಿದರು. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.