ಕ್ರಿಸ್ಮಸ್ ಸಂಭ್ರಮಕ್ಕೆ ಒಮಿಕ್ರಾನ್ ಅಡ್ಡಿ; ದಿಲ್ಲಿ, ಹರಿಯಾಣಗಳಲ್ಲಿ ಹೊಸ ನಿಯಮ
Team Udayavani, Dec 23, 2021, 6:50 AM IST
ಹೊಸದಿಲ್ಲಿ: ದೇಶದಲ್ಲಿ ಒಮಿಕ್ರಾನ್ ರೂಪಾಂತರಿ ಕೇಸ್‌ಗಳು ಹೆಚ್ಚಾಗುತ್ತಿರುವುದರಿಂದ ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಗೆ ಅಡ್ಡಿ ಖಚಿತ. ದಿಲ್ಲಿ, ಹರಿಯಾಣ, ಪಂಜಾಬ್‌ನಲ್ಲಿ ಹಲವು ಹೊಸಕಟ್ಟು ಪಾಡುಗಳನ್ನು ಆಯಾ ಸರಕಾರಗಳು ವಿಧಿಸಿವೆ. ಅದಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಹೊಸದಿಲ್ಲಿಯಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಪರಾಮರ್ಶೆ ನಡೆಸಲಿದ್ದಾರೆ.
ದಿಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರ (ಡಿಡಿಎಂಎ) ಬುಧವಾರ ಆದೇಶ ಹೊರಡಿಸಿ, ಕ್ರಿಸ್ಮಸ್, ಹೊಸವರ್ಷದ ಸಂಭ್ರಮಾಚರಣೆಗಳು ಹೊಸ ರೂಪಾಂತರಿಯ ಸೂಪರ್ ಸ್ಪ್ರೆಡ್ ಆಗುವ ಸ್ಥಳಗಳು ಆಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಹಾಲಿ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆದೇಶಿಸಿದೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿಯಮ ಪಾಲನೆ ನಿಟ್ಟಿನಲ್ಲಿ ಸೂಕ್ತ ಸಿಬಂದಿಯನ್ನು ನಿಯೋ ಜಿಸುವಂತೆಯೂ ಪ್ರಾಧಿಕಾರ ಆದೇಶಿಸಿದೆ. ಎಲ್ಲ ರೀತಿಯ ರಾಜಕೀಯ, ಕ್ರೀಡಾ ಚಟು ವಟಿಕೆಗಳು, ಮನೋರಂಜನೆ, ಸಾಂಸ್ಕೃತಿಕ ಚಟುವಟಿಕೆಗಳು, ಸಭಾಮಂದಿರಗಳಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಿಗೆ ತಡೆ ಹಾಕಲಾಗಿದೆ. ಹೊಸದಿಲ್ಲಿಯಲ್ಲಿ ಹೊಸತಾಗಿ 125 ಕೊರೊನಾ ಸೋಂಕು ದೃಢಪಟ್ಟಿದೆ. ಮುಂದಿನ ತಿಂಗಳಿಂದ ಅನ್ವಯವಾಗುವಂತೆ ಹರಿಯಾಣದಲ್ಲಿ ಮಾಲ್ಗಳಿಗೆ, ಸಭಾಭವನಗಳಿಗೆ, ಹೊಟೇಲ್, ಬ್ಯಾಂಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಲಸಿಕೆ ಹಾಕಿಸಿಕೊಳ್ಳದವರಿಗೆ ಪ್ರವೇಶ ನಿಷೇಧಿಸಲಾಗಿದೆ.
ಇದನ್ನೂ ಓದಿ:ಕುಂದಾಪುರ: ಕ್ರಿಸ್ಮಸ್ ಪ್ರಾರ್ಥನೆಗೆ ಶರತ್ತುಬದ್ಧ ಅನುಮತಿ
213 ದಾಟಿದ ಕೇಸ್: ಕೇಂದ್ರ ಸರಕಾರ ಬುಧವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ 213ಕ್ಕಿಂತ ಹೆಚ್ಚಾಗಿದೆ ರೂಪಾಂತರಿ ಕೇಸು. 15 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಅದು ದೃಢಪಟ್ಟಿದೆ. ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ 6,317 ಹೊಸ ಕೇಸ್ ಮತ್ತು 318 ಮಂದಿ ಅಸುನೀಗಿದ್ದಾರೆ.
ಅಖಿಲೇಶ್ ಪತ್ನಿಗೆ ಸೋಂಕು: ಉ.ಪ್ರ. ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಸ್ವಯಂ ಕ್ವಾರಂಟೈನ್ ಆಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ಅಲೀಗಢದಲ್ಲಿ ಗುರುವಾರ ರ್‍ಯಾಲಿ ನಡೆಯಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಲಸಿಕೆ ಸರ್ಟಿಫಿಕೆಟ್ ಇಲ್ಲದಿದ್ದರೆ ಸಂಬಳ ಇಲ್ಲ
“ಎರಡು ಡೋಸ್ ಲಸಿಕೆ ಹಾಕಿದರೆ ಮಾತ್ರ ಸಂಬಳ’ ಹೀಗೆಂದು ಪಂಜಾಬ್ ಸರಕಾರ ತನ್ನ ಉದ್ಯೋಗಿಗಳಿಗೆ ಖಡಕ್ ಆದೇಶ ನೀಡಿದೆ. ಒಂದು ಡೋಸ್ ಅಥವಾ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಇರುವ ಪ್ರಮಾಣ ಪತ್ರವನ್ನು ರಾಜ್ಯ ಸರಕಾರದ ಉದ್ಯೋಗಕ್ಕೆ ಸಂಬಂ ಧಿಸಿದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಹೀಗಾದರೆ ಮಾತ್ರ ಸರಕಾರಿ ಉದ್ಯೋಗಿಗಳಿಗೆ ಸಂಬಳ ಪಾವತಿಯಾ ಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇಸ್ರೇಲ್‌ನಲ್ಲಿ 4ನೇ ಡೋಸ್ ಲಸಿಕೆಗೆ ಆದೇಶ
ಅರವತ್ತು ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಕೊರೊನಾ ಲಸಿಕೆಯ ನಾಲ್ಕನೇ ಡೋಸ್ ನೀಡಲು ಇಸ್ರೇಲ್ ನಿರ್ಧರಿಸಿದೆ. ಹೆಚ್ಚಾಗುತ್ತಿರುವ ಒಮಿಕ್ರಾನ್ ರೂಪಾಂತರಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ನಾಲ್ಕನೇ ಡೋಸ್ ನೀಡಲು ನಿರ್ಧರಿಸಿದ ಜಗತ್ತಿನ ಮೊದಲ ರಾಷ್ಟ್ರವೂ ಇಸ್ರೇಲ್ ಆಗಿದೆ. ಇಸ್ರೇಲ್‌ನಲ್ಲಿ 340ಕ್ಕೂ ಹೆಚ್ಚು ಕೇಸ್‌ಗಳು ದೃಢಪಟ್ಟಿವೆ. ಇದರ ಜತೆಗೆ 60 ವರ್ಷದ ವ್ಯಕ್ತಿ ಬೀರ್ಶೆಬಾ ಎಂಬ ನಗರದಲ್ಲಿ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿರುವಂತೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಅದಕ್ಕೆ ಪೂರಕವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.