Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Team Udayavani, May 2, 2024, 4:15 PM IST
ಗ್ರೇಟರ್ ನೋಯ್ಡಾ: ಹಾಡಹಗಲೇ ಮಹಿಳೆಯೊಬ್ಬರು ಹೋಟೆಲ್ ಮಾಲೀಕನ ಮಗನನ್ನು ಅಪಹರಿಸಿದ ಭಯಾನಕ ಘಟನೆ ಗ್ರೇಟರ್ ನೋಯ್ಡಾದ ಕೊತ್ವಾಲಿ ಬಿಟಾ 2 ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ಬುಧವಾರ ಮಧ್ಯಾಹ್ನ ಘಟನೆ ನಡೆದಿರುವುದಾಗಿ ಹೇಳಿಕೊಂಡಿದ್ದು ಇದಕ್ಕೆ ಸಂಬಂಧಿಸಿದ ಸಿಸಿಟಿವಿ ಫೂಟೇಜ್ ಕೂಡ ಪೊಲೀಸರಿಗೆ ಸಿಕ್ಕಿದ್ದು ಅದರಲ್ಲಿ ಬಿಳಿ ಬಣ್ಣದ ಸ್ಕೊಡಾ ಕಾರೊಂದು ಹೋಟೆಲ್ ಬಳಿಯಲ್ಲಿ ನಿಂತ್ತಿದ್ದು ಮಹಿಳೆಯೊಬ್ಬರು ಕಾರಿನಿಂದ ಇಳಿದು ಹೋಟೆಲ್ ಕಡೆ ತೆರಳಿ ಕೆಲ ಹೊತ್ತಿನ ಬಳಿಕ ಹೋಟೆಲ್ ಮಾಲೀಕನ ಹದಿನೈದು ವರ್ಷದ ಮಗನ ಜೊತೆ ಕಾರಿನ ಬಳಿ ಬಂದಿದ್ದಾಳೆ ಈ ವೇಳೆ ಕಾರಿನಿಂದ ಸ್ವಲ್ಪ ದೂರದಲ್ಲಿ ಬಿಳಿ ಬಣ್ಣದ ಶರ್ಟ್ ಧರಿದಿದ್ದ ವ್ಯಕ್ತಿಯೊಬ್ಬರು ನಿಂತಿದ್ದು ಬಾಲಕ ಕಾರಿನಲ್ಲಿ ಕುಳಿತ ಕೂಡಲೇ ಬಿಳಿ ಬಣ್ಣದ ಧಿರಿಸು ಧರಿಸಿದ್ದ ವ್ಯಕ್ತಿ ಕೂಡ ಅವಸರದಲ್ಲಿ ಕಾರಿನಲ್ಲಿ ಕೂತು ವೇಗವಾಗಿ ತೆರಳುವ ದೃಶ್ಯ ಸೆರೆಯಾಗಿದೆ.
ಇತ್ತ ಹೋಟೆಲ್ ನಲ್ಲಿ ಮಗ ಕಾಣದೇ ಇದ್ದಾಗ ಮಗನ ಮೊಬೈಲ್ ಗೆ ತಂದೆ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಇದರಿಂದ ಗಾಬರಿಗೊಂಡ ತಂದೆ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಮಹಿಳೆಯೊಬ್ಬರು ಮಗನನ್ನು ಕರೆದುಕೊಂಡು ಹೋಗಿರುವುದು ಕಂಡು ಬಂದಿದೆ ಬಳಿಕ ಮನೆ, ಸಂಬಂದಿಕರ ಮನೆ ಹೀಗೆ ಆತನ ಸ್ನೇಹಿತರ ಮನೆಗೆಲ್ಲಾ ಕರೆ ಮಾಡಿದರೂ ಮಗನ ಪತ್ತೆಯಾಗಲಿಲ್ಲ ಇದರಿಂದ ಆತಂಕಗೊಂಡ ತಂದೆ ಪೊಲೀಸ್ ಠಾಣೆಗೆ ಬಂದು ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಬಾಲಕನ ಪತ್ತೆಗೆ ಮೂರು ತಂಡ ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
📽️ On Camera, 15-Year-Old Boy Kidnapped By Woman In Greater Noida https://t.co/zpgaB5yNla pic.twitter.com/sXvao9UEPd
— NDTV (@ndtv) May 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.