BJP Leader: ವಾಕಿಂಗ್ ಹೋಗುತ್ತಿದ್ದ ಬಿಜೆಪಿ ನಾಯಕನನ್ನು ನಡು ರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆ
Team Udayavani, Aug 11, 2023, 9:03 AM IST
ಮೊರಾದಾಬಾದ್: ಉತ್ತರ ಪ್ರದೇಶದ ಸಂಭಾಲ್‌ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರನ್ನು ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಸಂಭಾಲ್‌ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರು ಗುರುವಾರ ಸಂಜೆ ತನ್ನ ಗೆಳೆಯನ ಜೊತೆ ತನ್ನ ಅಪಾರ್ಟ್‌ಮೆಂಟ್‌ನ ಹೊರಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಚೌಧರಿ ಅವರನ್ನು ಕೂಡಲೇ ಮೊರಾದಾಬಾದ್‌ನಲ್ಲಿರುವ ಬ್ರೈಟ್‌ಸ್ಟಾರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸ್ಥಳೀಯ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಚೌಧರಿ ಅವರು ಸಂಭಾಲ್‌ನ ಅಸ್ಮೋಲಿ ಬ್ಲಾಕ್‌ನಿಂದ ಬ್ಲಾಕ್ ಮುಖ್ಯಸ್ಥರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಆದರೆ ಅದರಲ್ಲಿ ಯಶಸ್ವಿಯಾಗಲಿಲ್ಲ ಎನ್ನಲಾಗಿದೆ.
ಚೌಧರಿ ಮೇಲೆ ದಾಳಿ ನಡೆಸುವ ದೃಶ್ಯಾವಳಿಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮೊರಾದಾಬಾದ್ ಎಸ್‌ಎಸ್‌ಪಿ ಹೇಮರಾಜ್ ಮೀನಾ, “ಎರಡೂ ಪಕ್ಷಗಳ ನಡುವೆ ವೈಯಕ್ತಿಕ ದ್ವೇಷ ಮೊದಲಿನಿಂದಲೇ ಇತ್ತು. ಘಟನೆಗೆ ಸಂಬಂಧಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
Warning: Disturbing video
In #Moradabad, a purported CCTV footage of 3 bike borne assailants shooting from point-blank range at local #BJP leader Anuj Chaudhary out on walk has surfaced. #Cctv #cctvfootage #UttarPradesh #firing #bjpleader #bike #guns #gunfiring #walk
Cr. Twitter pic.twitter.com/qzjdkNtsXo— Ekta Chaubey (@EktaChaubey10) August 10, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.