Karnataka election result; ಮೋದಿ ಅಲೆ ಮುಗಿದಿದೆ: ಸಂಜಯ್ ರಾವತ್
Team Udayavani, May 14, 2023, 3:06 PM IST
ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಮೋಘ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಮುಗಿದಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯ ಸೋಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆಯಲ್ಲಿ ಪ್ರಧಾನಿ ಮೋದಿ, ಜೈ ಬಜರಂಗ ಬಲಿ ಘೋಷಣೆ ಕೂಗಿ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದರು. ಆದ್ದರಿಂದ ಈ ಚುನಾವಣಾ ಫಲಿತಾಂಶದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ಸೋಲಾಗಿದೆ ಎಂದರು.
ಕರ್ನಾಟಕದ ಚುನಾವಣೆಯಲ್ಲಿ ಏನು ಫಲಿತಾಂಶ ಬಂದಿದೆಯೋ ಅದೇ ಫಲಿತಾಂಶ 2024ರ ಲೋಕಸಭಾ ಚುನಾವಣೆಯಲ್ಲಿಯೂ ಬರಲಿದೆ ಎಂದು ಹೇಳಿದರು.
#WATCH | Karnataka has shown that people can defeat dictatorship. Congress won which means Bajrang Bali is with Congress and not BJP. Our Home Minister (Amit Shah) was saying that if BJP loses, there will be riots. Karnataka is calm and happy. Where are the riots?: Uddhav… pic.twitter.com/TpJRzySUMW
— ANI (@ANI) May 14, 2023
2024ರ ಲೋಕಸಭೆ ಚುನಾವಣೆಗೆ ನಮ್ಮ ತಯಾರಿ ಆರಂಭವಾಗಿದ್ದು, ಇಂದು ಶರದ್ ಪವಾರ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ, ಈ ಸಭೆಯಲ್ಲಿ 2024ರ ಚುನಾವಣೆ ಕುರಿತು ಚರ್ಚೆ ನಡೆಸಲಿದ್ದೇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.