ಜಮ್ಮು-ಕಾಶ್ಮೀರದ ಬೆಳವಣಿಗೆಯಿಂದ ಪಾಕ್ ನ ಯೋಜನೆ ಬುಡಮೇಲಾಗುತ್ತಿದೆ: ಎಸ್. ಜಯಶಂಕರ್
Team Udayavani, Oct 2, 2019, 8:10 AM IST
ವಾಷಿಂಗ್ಟನ್: ಜಮ್ಮು ಕಾಶ್ಮೀರದಲ್ಲಿನ ಅಭಿವೃದ್ದಿಯನ್ನು ಭಾರತ ಉನ್ನತ ಮಟ್ಟಕ್ಕೇರಿಸಿದರೆ, 70 ವರ್ಷಗಳಿಂದ ಪಾಕಿಸ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳು ತಲೆಕೆಳಗಾಗುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜಯಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ವಾಷಿಂಗ್ಟನ್ ನಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ನೆಟ್ ವರ್ಕ್ ಗಳನ್ನು ಸ್ಥಗಿತಗೊಳಿಸಿರುವುದು ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳ ದುರುಪಯೋಗವನ್ನು ತಡೆಗಟ್ಟಲು ಮತ್ತು ಯಾವುದೇ ರೀತಿಯ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಲು. ಕಾಶ್ಮೀರದಲ್ಲಿ 70 ವರ್ಷಗಳಿಂದ ಪಾಕ್ ಪಟ್ಟಾಭದ್ರಾ ಹಿತಾಸಕ್ತಿಯನ್ನು ಬೆಳೆಸಲು ಯತ್ನಿಸುತ್ತಿದೆ. ಯಾವುದೇ ವಿಷಯದಲ್ಲಿ ಯಥಾ ಸ್ಥಿತಿಯನ್ನು ಬದಲಾಯಿಸಿದಾಗ ಬಹಳಷ್ಟು ಅಪಾಯ ಉಂಟಾಗುತ್ತದೆ. ಅದರ ಜೊತೆಗೆ ಅಪಾರ ಪ್ರತಿಕ್ರೀಯೆಗಳು ಬರುತ್ತವೆ ಎಂದು 370 ನೇ ವಿಧಿಯ ರದ್ದತಿಯನ್ನು ಉಲ್ಲೇಖಿಸಿ ಮಾತನಡಿದರು.
ಕಾಶ್ಮೀರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲಾ ರೀತಿಯಲ್ಲೂ ಶ್ರಮಿಸಿಲಾಗುತ್ತಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಜನರು ಒಂದಲ್ಲಾ ಒಂದು ದಿನ ಭಾರತದತ್ತ ಮುಖ ಮಾಡುತ್ತಾರೆ. ಗಡಿರೇಖೆಯಯಲ್ಲಿ ನಡೆಯುತ್ತಿರುವ ಭಯೋತ್ಪಾದನೆಯನ್ನು ನಿಯಂತ್ರಿಸಲು ಭಾರತ ತಕ್ಕ ಕ್ರಮ ಕೈಗೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.