3ರ ಪೈಕಿ ಒಂದು ಪ್ರೆಗ್ನೆನ್ಸಿ ಗರ್ಭಪಾತದಲ್ಲಿ ಕೊನೆ
Team Udayavani, Dec 13, 2017, 6:20 AM IST
ನವದೆಹಲಿ: ಗರ್ಭಿಣಿಯರ ಆರೋಗ್ಯದ ಬಗ್ಗೆ ಯಾವ ಯೋಜನೆ ಜಾರಿಗೊಳಿಸಿದರೂ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾಗಿದೆ. ದೇಶದಲ್ಲಿ 4.81 ಕೋಟಿ ಗರ್ಭಿಣಿಯರಿದ್ದರೆ, ಅವರಲ್ಲಿ ಮೂರರ ಪೈಕಿ ಒಂದು ಪ್ರಕರಣ ಗರ್ಭಪಾತದಲ್ಲಿ ಕೊನೆಯಾಗುತ್ತದೆ ಎಂಬ ಆಘಾತಕಾರಿ ಅಂಶವು “ದ ಲಾನ್ಸೆಟ್’ ಎಂಬ ವೈದ್ಯಕೀಯ ನಿಯತಕಾಲಿಕ ನಡೆಸಿದ ಅಧ್ಯಯನದಲ್ಲಿ ಸಾಬೀತಾಗಿದೆ.
2015ನೇ ವರ್ಷಕ್ಕೆ ಸಂಬಂಧಿಸಿ ಈ ಅಧ್ಯಯನ ನಡೆದಿದೆ. ಇದೇ ಮೊದಲ ಬಾರಿಗೆ ಗರ್ಭಿಣಿಯರ ಆರೋಗ್ಯದ ಬಗ್ಗೆ ದೊಡ್ಡ ಪ್ರಮಾಣದಲ್ಲಿ ನಡೆಸಲಾಗಿರುವ ಅಧ್ಯಯನ ಇದಾಗಿದೆ. 15-49 ವಯೋಮಿತಿಯ ಪ್ರತಿ 1 ಸಾವಿರ ಮಹಿಳೆಯರಿಗೆ 47 ಮಂದಿ ಗರ್ಭಪಾತಕ್ಕೆ ಒಳಗಾಗುತ್ತಾರೆ. ಇದು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದರೆ ಕಡಿಮೆ ಮತ್ತು ನೇಪಾಳ ಮತ್ತು ಬಾಂಗ್ಲಾಗೆ ಹೋಲಿಸಿದರೆ ಹೆಚ್ಚು.
2015ರಲ್ಲಿ 1.56 ಕೋಟಿ ಗರ್ಭಪಾತಗಳು ನಡೆದಿವೆ. ಅದರಲ್ಲಿ ಅರ್ಧದಷ್ಟು ಅಂದರೆ ಶೇ.48ರಷ್ಟು ಪ್ರಕರಣಗಳು ಉದ್ದೇಶಪೂರ್ಕವಲ್ಲದ ಗರ್ಭಪಾತವಾಗಿವೆ. 80 ಲಕ್ಷ ಮಹಿಳೆಯರು ಗರ್ಭಪಾತಕ್ಕಾಗಿ ಸುರಕ್ಷಿತವಲ್ಲದ ವಿಧಾನಗಳನ್ನು ಬಳಸಿದ್ದಾರೆ. ಹೀಗಾಗಿ, ಅವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ಹೇಳಿದೆ.
ಈ ಬಗ್ಗೆ ಮಾತನಾಡಿರುವ ಅಧ್ಯಯನದ ಸಹ ಸಂಯೋಜಕ ಚಂದ್ರಶೇಖರ್, 2015ರಲ್ಲಿ ಸರ್ಕಾರದ ಗಮನಕ್ಕೆ ಬಂದಿರುವ ಪ್ರಕರಣಗಳಿಗಿಂತ ಐದು ಪಟ್ಟು ಹೆಚ್ಚು ಕೇಸುಗಳು ನಮಗೆ ಸಿಕ್ಕಿವೆ ಎಂದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಮತ್ತು ದಾದಿಯರು, ವ್ಯವಸ್ಥೆಗಳನ್ನು ಒದಗಿಸಿದರೆ ಗರ್ಭಪಾತ ತಡೆಯಬಹುದು ಎಂದು ಚಂದ್ರಶೇಖರ್ ಹೇಳಿದ್ದಾರೆ. ಗರ್ಭಪಾತ ವಿರೋಧಿ ಕಾನೂನು ದೇಶದಲ್ಲಿ ಕಠಿಣವಾಗಿದ್ದು, 20 ವಾರಗಳಿಗಿಂತ ಮೇಲ್ಪಟ್ಟ ಗರ್ಭವನ್ನು ಮಾತ್ರ ಅದೂ ತಾಯಿಯ ಜೀವಕ್ಕೆ ತೊಂದರೆಯಾಗಲಿದೆ ಎಂದು ದೃಢಪಟ್ಟರೆ ಮಾತ್ರ ತೆಗೆಯುವ ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.