ಜಮ್ಮು ಕಾಶ್ಮೀರ: ಓರ್ವ ಉಗ್ರನ ಹತ್ಯೆ; ಇನ್ನೊಬ್ಬನಿಗಾಗಿ ಶೋಧ
Team Udayavani, Jan 3, 2017, 10:54 AM IST
ಶ್ರೀನಗರ : ಜಮ್ಮು ಕಾಶ್ಮೀರದ ಬಾರಾ ಮೂಲಾ ಜಿಲ್ಲೆಯಲ್ಲಿಂದು ಮಂಗಳವಾರ ನಡೆದ ಭೀಕರ ಗುಂಡಿನ ಕಾದಾಟದಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆಗೈದಿರುವುದಾಗಿ ವರದಿಯಾಗಿದೆ.
ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ಗುಂಡಿನ ಕಾಳಗಕ್ಕೆ ಮುಂದಾದರು. ಈ ಕಾಳಗದಲ್ಲಿ ಓರ್ವ ಉಗ್ರ ಹತನಾದ ಎಂದು ಭದ್ರತಾ ಮೂಲಗಳು ಹೇಳಿವೆ.
ಭದ್ರತಾ ಪಡೆಗಳು ಈಗ ಈ ಪ್ರದೇಶವನ್ನು ಸುತ್ತುವರಿದಿದ್ದು ಇನ್ನಷ್ಟು ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿವೆ. ಹತ ಉಗ್ರನ ಬಳಿ ಇದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.