ಪ್ರತಿ ಕೆಜಿ ಈರುಳ್ಳಿಗೆ 80 ರೂ.
Team Udayavani, Sep 23, 2019, 5:05 AM IST
ಹೊಸದಿಲ್ಲಿ: ದೇಶದ ಹಲವು ಭಾಗಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 70 ರೂ.ಗಳಿಂದ 80 ರೂ. ವರೆಗೆ ತಲುಪಿದ್ದು, ಕೇಂದ್ರ ಸರಕಾರ ದರ ನಿಯಂತ್ರಣಕ್ಕೆ ಮುಂದಾಗಿದೆ. ಈರುಳ್ಳಿ ಪೂರೈಕೆಗೆ ಕ್ರಮ ಕೈಗೊಂಡಿರುವಂತೆಯೇ, 2-3 ದಿನಗಳಲ್ಲಿ ಹೊಸದಿಲ್ಲಿ ಸಹಿತ ಹಲವು ನಗರಗಳಲ್ಲಿ ಬೆಲೆ ಏರಿಕೆ ಯಾಗತೊಡಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕೆಜಿ ಈರುಳ್ಳಿ ಬೆಲೆ ಹೊಸದಿಲ್ಲಿಯಲ್ಲಿ 57 ರೂ., ಮುಂಬಯಿನಲ್ಲಿ 56 ರೂ., ಕೋಲ್ಕತಾದಲ್ಲಿ 48 ರೂ., ಚೆನ್ನೈಯಲ್ಲಿ 34 ರೂ. ಆಗಿದ್ದರೆ, ಗುರ್ಗಾಂವ್ ಮತ್ತು ಜಮ್ಮುವಿನಲ್ಲಿ 60 ರೂ. ಆಗಿತ್ತು.
ಇದೊಂದು ಹಠಾತ್ ಬೆಳವಣಿಗೆಯಾಗಿದ್ದು, 2-3 ದಿನಗಳಲ್ಲಿ ದರ ಏರಿಕೆ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್, ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶಗಳಲ್ಲಿ 2 ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಸದ್ಯ ಗೋದಾಮುಗಳಲ್ಲಿ ಸಂಗ್ರಹವಾಗಿರುವ ಈರುಳ್ಳಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ನವೆಂಬರ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಹೊಸ ಬೆಳೆ ಬರಲಿದೆ. ದೇಶದಲ್ಲಿ ಅತ್ಯಂತ ದೊಡ್ಡ ಈರುಳ್ಳಿ ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ಲಾಸಲ್ಗಾಂವ್‌ನಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕೆಜಿಗೆ 10 ರೂ. ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.