ಪಾಕಿಸ್ಥಾನದ ಮೂಲಕ ಭಾರತಕ್ಕೆ ಅಫ್ಘಾನ್ ಈರುಳ್ಳಿ
Team Udayavani, Dec 4, 2019, 11:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಟ್ಟಾರಿ-ವಾಘಾ: ದೇಶದಲ್ಲಿ ಈರುಳ್ಳಿ ದರಗಳು ಹೆಚ್ಚಾಗುತ್ತಿದ್ದಂತೆ ವ್ಯಾಪಾರಿಗಳು ಅಟ್ಟಾರಿ-ವಾಘಾ ಗಡಿಯ ಮೂಲಕ ಅಫ್ಘಾನಿಸ್ಥಾನದಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ. ಅಫ್ಘಾನಿಸ್ಥಾನದಿಂದ ಈರುಳ್ಳಿ ಸಾಗಿಸುವ ಸುಮಾರು 10 ರಿಂದ 15 ಟ್ರಕ್‌ಗಳು ಪ್ರತಿದಿನ ಅಮೃತಸರದ ಅಟ್ಟಾರಿ-ವಾಘಾ ಭೂ ಮಾರ್ಗದ ಮೂಲಕ ಭಾರತಕ್ಕೆ ಆಗಮಿಸುತ್ತಿದೆ.
ಒಂದು ಟ್ರಕ್ ಅಲ್ಲಿ 35 ಮೆಟ್ರಿಕ್ ಟನ್
ಪ್ರತಿದಿನ ಈರುಳ್ಳಿ ತುಂಬಿದ 10-15 ಟ್ರಕ್‌ಗಳು ಅಫ್ಘಾನಿಸ್ಥಾನದಿಂದ ಬರುತ್ತಿವೆ. ಪ್ರತಿ ಟ್ರಕ್ 35 ಮೆಟ್ರಿಕ್ ಟನ್ ಈರುಳ್ಳಿಯನ್ನು ಹೊತ್ತು ಭಾರತದತ್ತ ಬರುತ್ತಿದೆ. ಪಂಜಾಬ್ ಮತ್ತು ದಿಲ್ಲಿಯ ವ್ಯಾಪಾರಿಗಳು ಅಫ್ಘಾನಿಸ್ಥಾನದಿಂದ ಈರುಳ್ಳಿ ಆಮದು ಮಾಡಿಕೊಳ್ಳುತ್ತಿದ್ದಾರೆ. ಅವುಗಳನ್ನು ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಪೂರೈಸಲಾಗುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದ ಕಾರಣ ಸ್ಥಳೀಯ ವ್ಯಾಪಾರಿಗಳು ಅಫ್ಘಾನಿಸ್ಥಾನದಿಂದ ಬೆಳೆಯನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ. ಇದು ದೇಶದ ಇತರ ಮಾರುಕಟ್ಟೆಗೆ ಹೋಲಿಸಿದರೆ ಅಗ್ಗವಾಗಿದೆ.
80ರ ಆಸುಪಾಸಿನ ದರ
ಅಫ್ಘಾನಿಸ್ಥಾನದ ಚಿಲ್ಲರೆ ಮಾರುಕಟ್ಟೆಯಿಂದ ಆಮದಾದ ಈರುಳ್ಳಿಗೆ ಪ್ರತಿ ಕೆಜಿಗೆ 70-80 ರೂ.ಗಳ ಬೆಲೆ ನಿಗದಿಪಡಿಸಲಾಗಿದೆ. ಕೆಲವೊಮ್ಮೆ 5-10 ರೂ.ಗಳು ಹೆಚ್ಚು ಕಮ್ಮಿಯಾಗುತ್ತದೆ. ಇದೇ ಈರುಳ್ಳಿ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡಿದರೆ ಪ್ರತಿ ಕೆ.ಜಿ.ಗೆ 75-100 ರೂ.ಗೆ ವ್ಯಾಪಾರವಾಗುತ್ತದೆ. ದೇಶದಲ್ಲಿ ಈರುಳ್ಳಿ ದರಗಳು 100 ರೂ.ಗಳನ್ನು ದಾಟಿದ್ದು, ದುಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಭಾರತದ ವ್ಯಾಪಾರಸ್ಥರು ನೆರೆಯ ಅಫ್ಘಾನಿಸ್ಥಾನದಿಂದ ಈರುಳ್ಳಿಯನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ.
ಅಟ್ಟಾರಿ-ವಾಘಾ ಭೂ ಮಾರ್ಗದ ಮೂಲಕ ಭಾರತ ಮತ್ತು ಪಾಕಿಸ್ಥಾನದ ನಡುವಿನ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದ್ದರೂ, ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನ ನಡುವಿನ ದ್ವಿಪಕ್ಷೀಯ ಸಾರಿಗೆ ವ್ಯಾಪಾರ ಒಪ್ಪಂದದ ಪ್ರಕಾರ ಈರುಳ್ಳಿ ಸಾಗಿಸುವ ಲಾರಿಗಳು ಈ ಮಾರ್ಗದ ಮೂಲಕವೇ ಭಾರತಕ್ಕೆ ಬರುತ್ತದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಪಾಕಿಸ್ಥಾನವು ಆಗಸ್ಟ್‌ನಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸಿತ್ತು.
ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ಥಾನದಿಂದ ಆಮದು ಮಾಡಿಕೊಳ್ಳುವ ಎಲ್ಲಾ ಉತ್ಪನ್ನಗಳಿಗೆ ಭಾರತ ಶೇ. 200 ರಷ್ಟು ಕಸ್ಟಮ್ ಸುಂಕವನ್ನು ವಿಧಿಸಿತ್ತು. ಪುಲ್ವಾಮ ದಾಳಿ ನಡೆದ ಬಳಿಕ ಭಾರತ ಮತ್ತು ಪಾಕಿಸ್ಥಾನ ನಡುವೆ ರಾಜತಾಂತ್ರಿಕ ಸಂಬಂಧಗಳು ಸುಧಾರಿಸಿಲ್ಲ. ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ಭಾರತ ರದ್ದು ಪಡಿಸಿದ ಬಳಿಕ ಪಾಕಿಸ್ಥಾನ ಭಾರತದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.