ಅಧಿವೇಶನ: ಮುಂದುವರಿದ ಅನಿಶ್ಚಿತತೆ; ಸರ್ವಪಕ್ಷ ಸಭೆಯೂ ವಿಫಲ
ಪಟ್ಟುಬಿಡಲೊಪ್ಪದ ಆಡಳಿತ-ಪ್ರತಿಪಕ್ಷಗಳು
Team Udayavani, Mar 22, 2023, 6:45 AM IST
ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಆರಂಭವಾದಾಗಿನಿಂದ ಇಲ್ಲಿಯವರೆಗೂ ಆಡಳಿತ ಹಾಗೂ ಪ್ರತಿಪಕ್ಷಗಳ ಗದ್ದಲದಿಂದಾಗಿ ಕಲಾಪಗಳು ಕೊಚ್ಚಿಹೋಗಿವೆ.
ಮಂಗಳವಾರವೂ ಇದೇ ಸ್ಥಿತಿ ಮುಂದುವರಿದಿದ್ದು, ಉಭಯ ಸದನಗಳೂ ಮುಂದೂಡಲ್ಪಟ್ಟಿವೆ. ಈ ಬೆಳವಣಿಗೆಯು ಅನಿಶ್ಚಿತತೆಯನ್ನು ಸೃಷ್ಟಿಸಿದ್ದು, ಇಡೀ ಬಜೆಟ್ ಅಧಿವೇಶನವೇ ವ್ಯರ್ಥವಾಗಲಿದೆಯೇ ಎಂಬ ಅನುಮಾನ ಮೂಡಿಸಿದೆ.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಹಣಕಾಸು ಮಸೂದೆ ಸೇರಿದಂತೆ ಬಜೆಟ್‌ಗೆ ಅಂಗೀಕಾರ ಪಡೆಯಲು ಸರ್ಕಾರ ಪರ್ಯಾಯ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಏ.6ರಂದು ಅಧಿವೇಶನ ಸಮಾಪ್ತಿಯಾಗಲಿದೆ. ಆದರೆ, ಕಳೆದೊಂದು ವಾರದಿಂದಲೂ, ಒಂದು ಕಡೆ “ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು’ ಎಂದು ಆಡಳಿತಾರೂಢ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದರೆ, ಮತ್ತೂಂದು ಕಡೆ “ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒಪ್ಪಿಸಬೇಕು’ ಎಂದು ಕಾಂಗ್ರೆಸ್ ಪಟ್ಟುಹಿಡಿದಿದೆ. ಎರಡೂ ಕಡೆ ಗದ್ದಲ ಮುಂದುವರಿದಿರುವ ಕಾರಣ ಕಲಾಪಗಳು ಪ್ರತಿ ದಿನವೂ ಮುಂದೂಡಲ್ಪಡುತ್ತಿವೆ.
ಸರ್ವಪಕ್ಷ ಸಭೆಯೂ ವಿಫಲ:
ಸುಗಮ ಸಂಸತ್ ಕಲಾಪಕ್ಕಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ ಕರೆದಿದ್ದ ಸರ್ವಪಕ್ಷ ಸಭೆಯೂ ವಿಫಲವಾಗಿದೆ. ಅದಾನಿ ಪ್ರಕರಣವನ್ನು ಜೆಪಿಸಿ ತನಿಖೆಗೆ ಒಪ್ಪಿಸಲೇಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ರಾಹುಲ್ ಕ್ಷಮೆ ಕೋರಲೇಬೇಕು ಎಂದು ಬಿಜೆಪಿ ಹಠ ಹಿಡಿಯಿತು. ಈ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಒಮ್ಮತ ಮೂಡದ ಕಾರಣ, ಸಭೆಯ ಉದ್ದೇಶ ಈಡೇರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಇನ್ನು, ಮಂಗಳವಾರವೂ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ವ್ಯರ್ಥವಾಗಿದ್ದು, ಬುಧವಾರ ಯುಗಾದಿ ಹಬ್ಬವಿರುವ ಕಾರಣ ಗುರುವಾರಕ್ಕೆ ಮುಂದೂಡಿಕೆಯಾಗಿವೆ.
ಅನುಮತಿ ಕೇಳಿದ ರಾಹುಲ್:
ಈ ನಡುವೆ, ಮಂಗಳವಾರವೂ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ನನ್ನ ವಿರುದ್ಧ ಬಿಜೆಪಿಯ ಹಿರಿಯ ನಾಯಕರು ಸಂಪೂರ್ಣ ಆಧಾರರಹಿತ, ನ್ಯಾಯಸಮ್ಮತವಲ್ಲದ ಆರೋಪಗಳನ್ನು ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಲು ನನಗೆ ಅವಕಾಶ ಕೊಡಿ’ ಎಂದು ಮನವಿ ಮಾಡಿದ್ದಾರೆ.
ರಾಹುಲ್‌ರನ್ನು ಮೀರ್ ಜಾಫರ್‌ಗೆ ಹೋಲಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಭಾರತೀಯ ರಾಜಕಾರಣದ ಮೀರ್ ಜಾಫರ್‌ಗೆ ಹೋಲಿಸಿದೆ. “ಮೀರ್ ಜಾಫರ್ ಭಾರತದಲ್ಲಿ “ನವಾಬ’ನಾಗಲು ವಿದೇಶಿ ಶಕ್ತಿಗಳ ಬೆಂಬಲ ಕೋರಿ ಹೊರದೇಶಕ್ಕೆ ಹೋಗಿದ್ದ. ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ್ದೂ ಇದನ್ನೇ. ಹೀಗಾಗಿ ಅವರನ್ನು ಈ ಕಾಲ ಮೀರ್ ಜಾಫರ್ ಎಂದು ಕರೆಯಬಹುದು’ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ. ಅಲ್ಲದೇ, ರಾಹುಲ್ ಅವರು ವಿದೇಶಿ ನೆಲದಲ್ಲಿ ಭಾರತದ ವಿರುದ್ಧ ಮಾತನಾಡಿದ್ದು ಇದೇ ಮೊದಲಲ್ಲ. ಪ್ರತಿ ಬಾರಿಯೂ ಅವರು ಹೀಗೇ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬದ ಸಂಚಿದು. ರಾಹುಲ್ ಕ್ಷಮೆ ಕೇಳದೇ ನಾವು ಬಿಡುವುದಿಲ್ಲ ಎಂದೂ ಪಾತ್ರಾ ಆರೋಪಿಸಿದ್ದಾರೆ.
ಪ್ರತಿಪಕ್ಷ ಸದಸ್ಯರ ಪ್ರತಿಭಟನೆ
ಹಲವು ಪ್ರತಿಪಕ್ಷಗಳ ಸದಸ್ಯರು ಮಂಗಳವಾರವೂ ಸಂಸತ್‌ಭವನದ ಕಾರಿಡಾರ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. “ವೀ ವಾಂಟ್ ಜೆಪಿಸಿ’ ಎಂಬ ಫಲಕಗಳನ್ನು ಹಿಡಿದು, ಅದಾನಿ ಪ್ರಕರಣವನ್ನು ಜೆಪಿಸಿ ತನಿಖೆಗೆ ಒಪ್ಪಿಸಲೇಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಟಿಎಂಸಿ ಸದಸ್ಯರು ಪ್ರತ್ಯೇಕವಾಗಿ ಸಂಸತ್ ಭವನದ ಮುಂದೆ ಪ್ರತಿಭಟಿಸಿ, “ಅದಾನಿ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು’ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.