ಗೋವಾದಲ್ಲಿ ಕೋವಿಡ್ ರಣಕೇಕೆ: ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ
Team Udayavani, May 1, 2021, 7:56 PM IST
ಪಣಜಿ: ಗೋವಾದಲ್ಲಿ ಕೋವಿಡ್ ಸೋಂಕು ದೃಢಪಡುತ್ತಿರುವ ಪ್ರಮಾಣ ಶೇ 51 ರಷ್ಟಿದೆ. ಇದು ದೇಶದಲ್ಲಿ ಅತ್ಯಧಿಕ ಎಂದೇ ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್‍ಗಳಿಲ್ಲದೆಯೇ ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗಿ ಚಿಕಿತ್ಸೆ ಪಡೆಯುವ ದುಸ್ಥಿತಿ ಎದುರಾಗಿದೆ. ಮಡಗಾಂವ ಜಿಲ್ಲಾಸ್ಪತ್ರೆಯಲ್ಲಿ ಇಂತಹ ದೃಶ್ಯ ಸರ್ವೆಸಾಮಾನ್ಯವಾಗಿ ಕಂಡುಬರುತ್ತಿದೆ.
ರಾಜ್ಯದಲ್ಲಿ ಕೇವಲ ಸೋಂಕಿತರಷ್ಟೇ ಅಲ್ಲ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಆತಂಕ ಸೃಷ್ಠಿಸಿದೆ. ಪ್ರತಿದಿನ 20 ಕ್ಕೂ ಹೆಚ್ಚು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಗೋವಾದಲ್ಲಿಯೇ ಅತ್ಯಧಿಕ ಸೋಂಕು ಮಡಗಾಂವನಲ್ಲಿ ದೃಡಪಟ್ಟಿದೆ. ಕೇವಲ ಮಡಗಾಂವವೊಂದರಲ್ಲೇ ಪ್ರತಿದಿನ 1900 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ದೃಡಪಟ್ಟಿದೆ.
ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವೀಕೆಂಡ್ ಲಾಕ್‍ಡೌನ್ ಘೋಷಿಸಿದೆ. ಹಲವು ಆಸ್ಪತ್ರೆಗಳಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸುತ್ತಲೇ ಇದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಲಾಕ್‍ಡೌನ್ 15 ದಿನಗಳ ಕಾಲ ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.