ವಿದ್ಯಾರ್ಥಿಗಳ ಸಾಮಾಜಿಕ ಜಾಲತಾಣ ವಿವರಕ್ಕೆ ಆದೇಶ
Team Udayavani, Jul 11, 2019, 5:00 AM IST
ಹೊಸದಿಲ್ಲಿ: ಇನ್ನು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೂ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳನ್ನು ಕಾಲೇಜು ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕು. ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳನ್ನು ವಿದ್ಯಾರ್ಥಿಗಳು ಹಂಚಿಕೊಳ್ಳಬೇಕಿದ್ದು, ಕನಿಷ್ಠ ಒಂದು ಧನಾತ್ಮಕ ಸ್ಟೋರಿಯನ್ನು ಹಂಚಿಕೊಳ್ಳಲು ಇದನ್ನು ಬಳಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ. ಈ ಸಂಬಂಧ ಇತ್ತೀಚೆಗಷ್ಟೇ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಆದೇಶ ಹೊರಡಿಸಿದೆ.
ಆದರೆ ಈ ಸುತ್ತೋಲೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಖಾತೆಗಳನ್ನು ಬಳಸಿಕೊಂಡು ನಮ್ಮ ಮೇಲೆ ಹದ್ದಿನ ಕಣ್ಣು ಇಡಬಹುದು. ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ ದೃಷ್ಟಿ ಕೋನಗಳನ್ನು ಹಂಚಿಕೊಂಡರೂ ಮುಂದೊಂದು ದಿನ ನಮ್ಮನ್ನು ಸಚಿವಾಲಯ ಹಾಗೂ ಶಿಕ್ಷಣ ಸಂಸ್ಥೆಗಳು ಪ್ರಶ್ನಿಸಬಹುದು ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ, ಪ್ರತಿ ಕಾಲೇಜು ಕೂಡ ಒಬ್ಬ ಸಿಬಂದಿಯನ್ನು ಸೋಷಿಯಲ್ ಮೀಡಿಯಾ ಚಾಂಪಿಯನ್ ಎಂಬುದಾಗಿ ಘೋಷಿಸಬೇಕು ಎಂದೂ ಸುತ್ತೋಲೆಯಲ್ಲಿ ಸೂಚಿಸ ಲಾಗಿದೆ. ಇವರು ಕಾಲೇಜಿನ ಸೋಷಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಿಸಬೇಕು ಮತ್ತು ಕಾಲೇಜು, ವಿದ್ಯಾರ್ಥಿಗಳು ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿ ವಾಲ ಯದೊಂದಿಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಸಂಪರ್ಕ ಸಾಧಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.