ನನಗೆ ಗೌರವ ಬೇಡ, ಬದಲಿಗೆ ಒಂದು ಬಡ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳಿ: ಮೋದಿ ಕರೆ
Team Udayavani, Apr 9, 2020, 6:51 AM IST
ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ ನಮಗಾಗಿ ಮತ್ತು ನಮ್ಮ ರಾಷ್ಟ್ರಕ್ಕಾಗಿ ತುಂಬಾ ಶ್ರಮಿಸಿದ್ದಾರೆ’ ಎಂಬ ಒಕ್ಕಣೆಯುಳ್ಳ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದ ತುಂಬೆಲ್ಲಾ ಹರಿದಾಡುತ್ತಿರುವುದು. ಮತ್ತು ಈ ಪೋಸ್ಟರ್ ಅನ್ನು ಸಾಧ್ಯವಾದಷ್ಟು ಜನರಿಗೆ ಫಾರ್ವರ್ಡ್ ಮಾಡುವಂತೆಯೂ ಮನವಿ ಮಾಡಿಕೊಳ್ಳಲಾಗಿತ್ತು.
ಈ ಕುರಿತು ಟ್ವೀಟ್ ಮಾಡಿರುವ ಮೋದಿ ‘5 ನಿಮಿಷಗಳ ಕಾಲ ನಿಂತು ಮೋದಿಯನ್ನು ಗೌರವಿಸುವ ಅಭಿಯಾನವನ್ನು ಕೆಲವರು ನಡೆಸುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಮೊದಲ ನೋಟದಲ್ಲಿ ಮೋದಿಯನ್ನು ವಿವಾದಗಳಿಗೆ ಎಳೆಯುವ ಕಿಡಿಗೇಡಿತನದ ವರ್ತನೆಯಂತೆ ಇದು ತೋರುತ್ತಿದೆ’ ಎಂದು ಪ್ರಧಾನಿಯವರು ಈ ಅಭಿಯಾನದ ವಿಷಯಕ್ಕೆ ಸಂಬಂಧಿಸಿದ ತಮ್ಮ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
हो सकता है कि यह किसी की सदिच्छा हो, तो भी मेरा आग्रह है कि यदि सचमुच में आपके मन में इतना प्यार है और मोदी को सम्मानित ही करना है तो एक गरीब परिवार की जिम्मेदारी कम से कम तब तक उठाइए, जब तक कोरोना वायरस का संकट है। मेरे लिए इससे बड़ा सम्मान कोई हो ही नहीं सकता।
— Narendra Modi (@narendramodi) April 8, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.