ವಿಷದ ವಿರುದ್ಧ ನಮ್ಮ ಹೋರಾಟ: ರಾಹುಲ್
Team Udayavani, Jun 9, 2019, 6:00 AM IST
ವಯನಾಡ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನನ್‌ಗಳನ್ನು ಭೇಟಿಯಾದರು.
ವಯನಾಡ್: ಸ್ವಕ್ಷೇತ್ರ ವಯನಾಡ್ ಪ್ರವಾಸ ದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 2ನೇ ದಿನದ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ನಾವು ರಾಷ್ಟ್ರೀಯ ಮಟ್ಟದಲ್ಲಿ ವಿಷದ ವಿರುದ್ಧ ಹೋರಾಡು ತ್ತಿದ್ದೇವೆ. ಮೋದಿ ಅವರು ಲೋಕಸಭೆ ಚುನಾವಣಾ ಪ್ರಚಾರವು ಸುಳ್ಳುಗಳು, ವಿಷ ಹಾಗೂ ದ್ವೇಷದಿಂದ ಕೂಡಿತ್ತು. ಆದರೆ ನಮ್ಮ ಪಕ್ಷವು ಸತ್ಯ, ಪ್ರೀತಿ ಮತ್ತು ವಾತ್ಸಲ್ಯದಿಂದ ಪ್ರಚಾರ ನಡೆಸಿತು ಎಂದಿದ್ದಾರೆ.
ಶನಿವಾರ ರಾಹುಲ್ ಕಲ್ಪೆಟ್ಟಾ, ಕಂಬಳಕಾಡು, ಪನಮಾರಮ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಜತೆಗೆ ರೋಡ್‌ಶೋವನ್ನೂ ನಡೆಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್, ಕೇರಳ ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ, ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್ ಮತ್ತಿತರ ನಾಯಕರು ರಾಹುಲ್‌ಗೆ ಸಾಥ್ ನೀಡಿದರು. ಶನಿವಾರ ರಾಹುಲ್ ಒಟ್ಟು 6 ರೋಡ್‌ಶೋಗಳಲ್ಲಿ ಭಾಗವಹಿಸಿದರು.
ದೂರುಗಳನ್ನು ಸ್ವೀಕರಿಸಿದ ರಾಹುಲ್: ಇದಕ್ಕೂ ಮುನ್ನ ವಯನಾಡ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಹುಲ್ ಅವರು ಜನರ ದೂರುಗಳು ಹಾಗೂ ಮನವಿಗಳನ್ನು ಸ್ವೀಕರಿಸಿದರು. ರೈತರು, ಬುಡಕಟ್ಟು ಜನಾಂಗೀಯರು ಹಾಗೂ ಸಮಾಜದ ಇತರೆ ವರ್ಗಗಳ ನಿಯೋಗವು ರಾಹುಲ್‌ರನ್ನು ಭೇಟಿಯಾಗಿ ಸಮಸ್ಯೆಗಳನ್ನು ಹೇಳಿಕೊಂಡಿತು.
ಇದೇ ವೇಳೆ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ನಾಯಕರು, ಜಿಲ್ಲೆಯ ಅಧಿಕಾರಿಗಳೊಂದಿಗೆ ರಾಹುಲ್ ಸಭೆ ನಡೆಸಿ, ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.