ವರುಣಾರ್ಭಟ: 145ಕ್ಕೂ ಹೆಚ್ಚು ಮಂದಿ ಮೃತ್ಯು, ಉತ್ತರಾಖಂಡ, ಹರಿಯಾಣದಲ್ಲಿ ಭಾರೀ ಮಳೆ ಎಚ್ಚರಿಕೆ
Team Udayavani, Jul 14, 2023, 9:39 AM IST
ನವದೆಹಲಿ: ಉತ್ತರ ಭಾರತ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಅದರಂತೆ ದೇಶದಲ್ಲಿ ಮಳೆ ಪ್ರಾರಂಭವಾದಾಗಿನಿಂದ ಇದುವರೆಗೂ 145 ಕ್ಕೂ ಹೆಚ್ಚು ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಗುಡ್ಡಗಾಡು ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಮತ್ತೆ ಮುಂದುವರಿದಿದ್ದು, ಹಲವಾರು ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ.
ಮಳೆ ಪ್ರಾರಂಭವಾದಾಗಿನಿಂದ ಹಿಮಾಚಲ ಪ್ರದೇಶದಲ್ಲಿ 91 ಮಂದಿ ಮೃತಪಟ್ಟಿದ್ದರೆ, ಉತ್ತರ ಪ್ರದೇಶದಲ್ಲಿ 14, ಹರಿಯಾಣದಲ್ಲಿ 16, ಪಂಜಾಬ್ನಲ್ಲಿ 11 ಮತ್ತು ಉತ್ತರಾಖಂಡದಲ್ಲಿ 16 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಉತ್ತರಾಖಂಡ್ ಮತ್ತು ಹರಿಯಾಣದಲ್ಲಿ ಇಂದೂ ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದೆಹಲಿಯ ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದ್ದು, ಅಷ್ಟು ಮಾತ್ರವಲ್ಲದೆ ಜುಲೈ 14 ರವರೆಗೆ ಕೆಂಪು ಕೋಟೆಯನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ.
ಇದನ್ನೂ ಓದಿ: Vitla: ಮನೆ ಮೇಲೆ ಉರುಳಿ ಬಿದ್ದ ಪಿಕಪ್: ಮನೆಯೊಳಗೆ ಮಹಿಳೆ ತತ್ತರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.