ದೇಶದಲ್ಲಿ 2.7 ಲಕ್ಷ ದಾಟಿದ ಕೋವಿಡ್-19 ಪ್ರಕರಣ: ಮಹಾರಾಷ್ಟ್ರದಲ್ಲಿ 94 ಸಾವಿರ ಸೋಂಕಿತರು
Team Udayavani, Jun 11, 2020, 8:54 AM IST
ಬೆಂಗಳೂರು: ದೆಹಲಿ, ಮುಂಬೈ, ಅಹಮದಾಬಾದ್, ಚೆನ್ನೈ, ಕೊಲ್ಕತ್ತಾ ಮತ್ತು ಬೆಂಗಳೂರಿನ ಆರು ನಗರಗಳಲ್ಲಿ ಕೋವಿಡ್- 19 ಅನ್ನು ಎದುರಿಸಲು ಕೈಗೊಳ್ಳುತ್ತಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ಮತ್ತು ರಾಜ್ಯ ಆರೋಗ್ಯ ಅಧಿಕಾರಿಗಳಿಗೆ ಸಹಾಯ ಮಾಡಲು ಕೇಂದ್ರ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಏತನ್ಮಧ್ಯೆ ದೇಶದಲ್ಲಿ ಕೋವಿಡ್ -19 ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ , ಸಕ್ರೀಯ ಪ್ರಕರಣಗಳಿಗಿಂತಲೂ ಹೆಚ್ಚಿದೆ ಎಂದ ಆರೋಗ್ಯ ಸಚಿವಾಲಯ ತಿಳಿಸಿದೆ. ಬುಧವಾರ( 10-6-2020) ಒಂದೇ ದಿನ 10,000 ಹೊಸ ಪ್ರಕರಣಗಳು ಕಂಡುಬಂದಿದ್ದು ಒಟ್ಟಾರೆ ಸೋಂಕಿತರ ಪ್ರಮಾಣ 2.7 ಲಕ್ಷ ದಾಟಿದೆ. ಸಾವಿನ ಸಂಖ್ಯೆ ಕೂಡ 7,745 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
ಮುಂಬೈಯಲ್ಲಿ ಕೋವಿಡ್ -19 ಪ್ರಕರಣಗಳು 52,000 ದಾಟಿದ್ದು, ಒಟ್ಟಾರೆ ಮಹಾರಾಷ್ಟ್ರ ರಾಜ್ಯದಲ್ಲಿ 94,000 ಜನರಿಗೆ ವೈರಾಣು ತಗುಲಿದೆ. ಈವರೆಗೂ ಸುಮಾರು 3,438 ಜನರು ಇಲ್ಲಿ ಮೃತರಾಗಿದ್ದಾರೆಂದು ವರದಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 31,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅಹಮದಾಬಾದ್‌ನಲ್ಲಿ ಸುಮಾರು 15,000 ಪ್ರಕರಣಗಳು ಮತ್ತು ಚೆನ್ನೈನಲ್ಲಿ 22,000 ಪ್ರಕರಣಗಳು ದಾಖಲಾಗಿವೆ.
ಜಾಗತಿಕವಾಗಿ 7 ಮಿಲಿಯನ್ ಜನರಿಗೆ ಈ ಮಹಾಮಾರಿ ಕೋವಿಡ್ ತಗುಲಿದ್ದು, 4 ಲಕ್ಷಕ್ಕಿಂತ ಹೆಚ್ಚು ಜನರು ಮೃತರಾಗಿದ್ದಾರೆ. ಅಮೆರಿಕಾವೊಂದರಲ್ಲೇ 20 ಲಕ್ಷ ಸೋಂಕಿತರಿದ್ದು, 1.15 ಲಕ್ಷ ಜನರು ಮೃತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.