![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 1, 2023, 7:45 AM IST
ನವದೆಹಲಿ: ಭ್ರಷ್ಟಾಚಾರ ಪ್ರಕರಣ ಸಂಬಂಧಿಸಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಕಳೆದ 3 ವರ್ಷಗಳಲ್ಲಿ 2,000 ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಕಳೆದ ವರ್ಷ ಇಂಥ ಪ್ರಕರಣಗಳ ಸಂಖ್ಯೆ ಶೇ.44ರಷ್ಟು ಹೆಚ್ಚಳವಾಗಿದೆ ಎಂದು ಗೃಹ ಸಚಿವಾಲಯ ಬಿಡುಗಡೆಗೊಳಿಸಿರುವ ವರದಿಯಲ್ಲಿ ತಿಳಿಸಲಾಗಿದೆ.
ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಮೂವರು ಅಧಿಕಾರಿಗಳು ಸೇರಿದಂತೆ 4 ಮಂದಿಯನ್ನು ಶನಿವಾರವಷ್ಟೇ ಭ್ರಷ್ಟಾಚಾರ ಆರೋಪದ ಮೇರೆಗೆ ಸಿಬಿಐ ಬಂಧಿಸಿ, ಅವರಿಂದ 60 ಲಕ್ಷ ರೂ.ಗಳವರೆಗಿನ ನಗದನ್ನು ವಶಪಡಿಸಿಕೊಂಡಿತ್ತು. ಈ ಬೆನ್ನಲ್ಲೇ ಸಚಿವಾಲಯದ ಈ ವರದಿ ಬಿಡುಗಡೆಗೊಂಡಿದೆ.
ದತ್ತಾಂಶಗಳ ಪ್ರಕಾರ, ಕಳೆದ 3 ವರ್ಷದಲ್ಲಿ ಪೊಲೀಸರು ಸೇರಿದಂತೆ ಇತರೆ 2,000 ಸಾರ್ವಜನಿಕ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 2020ರಲ್ಲಿ 608 ಮಂದಿ ಪೊಲೀಸರು ಮತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಲಾಗಿತ್ತು.
ನಂತರ 2021ರಲ್ಲಿ ಈ ಪ್ರಕರಣಗಳ ಸಂಖ್ಯೆ 582ಕ್ಕೆ ಇಳಿಕೆಯಾಗಿತ್ತು. ಆದರೆ, 2021ರಲ್ಲಿ ಮತ್ತೆ ಹೆಚ್ಚಳ ಕಂಡಿದ್ದು, ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೂ ಸೇರಿ ಒಟ್ಟು 884 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.