ರಾಜ್ಯ,ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ 37.93ಕೋಟಿ ಲಸಿಕೆ ಪ್ರಮಾಣಗಳ ಪೂರೈಕೆ : ಕೇಂದ್ರ
Team Udayavani, Jul 8, 2021, 3:34 PM IST
ನವ ದೆಹಲಿ : ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಕೋವಿಡ್ ಲಾಕ್ ಡೌನ್ ನನ್ನು ತೆರವುಗೊಳಿಸಿದ್ದು, ಕೇಂದ್ರ ಸರ್ಕಾರ ಈಗ ಲಸಿಕಾ ಅಭಿಯಾನದತ್ತ ಹೆಚ್ಚು ಗಮನ ನೀಡುತ್ತಿದೆ.
ದೇಶದ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಗಳಿಗನುಗುಣವಾಗಿ ಈಗಾಗಲೇ ಕೇಂದ್ರ ಸರ್ಕಾರದ ಕಡೆಯಿಂದ 37.93 ಕೋಟಿಯಷ್ಟು ಪ್ರಮಾಣದ ಲಸಿಕೆಗಳನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ‘ವಿಕ್ರಾಂತ್ ರೋಣ’ ಹಾಡಿಗೆ ಜಾಕ್ವೆಲಿನ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ?
23, 80, 000 ಅಷ್ಉ ಕೋವಿಡ ಲಸಿಕೆಗಳು ರಾಜ್ಯಗಳಿಗಾಗಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗಾಗಿ ಪೂರೈಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದರ ಹೊರತಾಗಿ, ಇಂದು ಬೇಳಗ್ಗಿನ ತನಕದ ಡಾಟಾ ವರದಿಯ ಪ್ರಕಾರ, ಒಟ್ಟು ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಿದ ಲಸಿಕೆಗಳ ಒಟ್ಟು ಪ್ರಮಾಣದಲ್ಲಿ 36, 09, 69, 128 ಲಸಿಕೆಗಳು ಬಳಕೆಯಾಗದೆ ವ್ಯರ್ಥವಾಗಿದೆ ಎಂದು ಕೂಡ ತಿಳಿಸಿದೆ.
ಇನ್ನು, ದೇಶದಾದ್ಯಂತ ಒಟ್ಟು 1,83,87,662 ರಷ್ಟು ಹೆಚ್ಚುವರಿ ಲಸಿಕೆಯ ಪ್ರಮಾಣಗಳು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದಿದೆ.
ಲಸಿಕಾ ಅಭಿಯಾನವನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಲಸಿಕೆಗಳನ್ನು ಪೂರೈಸುವುದಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಶೇಕಡಾ 75 ರಷ್ಟು ಲಸಿಕೆಗಳು ಸಿದ್ಧವಾಗುತ್ತಿವೆ. ಅದು ಉತ್ಪಾದಕರಿಂದ ಲಭ್ಯವಾದಗ ಅಗತ್ಯಗಳಿಗನುಗುಣವಾಗಿ ರಾಜ್ಯಗಳಗೆ ಪೂರೈಸಲಾಗುತ್ತದೆ ಎಂದು ಸಚಿವಾಲಯ ಹೇಳಿದೆ.
ಇದನ್ನೂ ಓದಿ : ಸಂಪುಟದಲ್ಲಿ ಜಾತಿ, ಪ್ರಾದೇಶಿಕ ಸಮತೋಲನಕ್ಕೆ ಆದ್ಯತೆ ನೀಡಿದ ಪ್ರಧಾನಿ ಅಭಿನಂದನಾರ್ಹ: ನಿರಾಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.