ಕೋಟಿ ಜನರನ್ನು ತಲುಪಿದ ಆಯುಷ್ಮಾನ್ ಭಾರತ್
1 ಕೋಟಿ ಫಲಾನುಭವಿ, ಯೋಧನ ಪತ್ನಿ ಜತೆ ಸಂವಾದ ; ಜಗತ್ತಿನ ಅತಿದೊಡ್ಡ ಆರೋಗ್ಯ ಸೇವೆ: ಮೋದಿ ಬಣ್ಣನೆ
Team Udayavani, May 21, 2020, 6:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಿಂದ 1 ಕೋಟಿಗೂ ಅಧಿಕ ಮಂದಿ ಉಚಿತ ಚಿಕಿತ್ಸೆ ಪಡೆದಿದ್ದಾರೆ.
ಇದು ಪ್ರತಿ ಭಾರತೀಯನಿಗೂ ಹೆಮ್ಮೆಯ ಸಂಗತಿ. ಕೇವಲ ಎರಡೇ ವರ್ಷಗಳಲ್ಲಿ ಜಗತ್ತಿನ ಅತಿದೊಡ್ಡ ಆರೋಗ್ಯ ಸೇವೆಯ ಸಾಲಿಗೆ ಆಯುಷ್ಮಾನ್ ಸೇರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮೇಘಾಲಯದ ಯೋಧನ ಪತ್ನಿ ಪೂಜಾ ಥಾಪಾ, ಒಂದು ಕೋಟಿಯ ಫಲಾನುಭವಿ ಆದ ಹಿನ್ನೆಲೆಯಲ್ಲಿ ಬುಧವಾರ ಆಕೆಯೊಂದಿಗೆ ಪ್ರಧಾನಿ ಸಂವಾದ ನಡೆಸಿದರು.
‘ಆಯುಷ್ಮಾನ್ ಮೂಲಕ ಬಡವರಿಗೆ, ಕೆಳಹಂತದ ಜನರಿಗೆ ಸರಕಾರದ ಮೇಲೆ ನಂಬಿಕೆ ಹೆಚ್ಚಾಗಿದೆ’ ಎಂದು ಹೇಳಿದರು.
ಕೋವಿಡ್ ಗೂ ಚಿಕಿತ್ಸೆ: ಆಯುಷ್ಮಾನ್ ವಿಮೆಯಡಿ, 53 ಕೋಟಿ ಮಂದಿ ಕೋವಿಡ್ ಸೋಂಕಿನ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪ್ರಸ್ತುತ 2131 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
21,565 ಆಸ್ಪತ್ರೆಗಳಲ್ಲಿ ಈ ಯೋಜನೆಯ ಪ್ರಯೋಜನ ಲಭ್ಯವಿದೆ. ದೇಶಾದ್ಯಂತದ ಆಸ್ಪತ್ರೆಗಳಲ್ಲಿ ಸುಮಾರು 13,412 ಕೋಟಿ ರೂ.ಗಳ ಚಿಕಿತ್ಸೆಯನ್ನು ಕೇಂದ್ರ ಸರಕಾರ ಉಚಿತವಾಗಿ ನೀಡಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ತಿಳಿಸಿದೆ.
ಟಾಪ್ ರಾಜ್ಯಗಳು: ಗುಜರಾತ್, ತಮಿಳುನಾಡು, ಛತ್ತೀಸ್‌ಗಢ, ಕೇರಳ ಹಾಗೂ ರಾಜಸ್ಥಾನ ರಾಜ್ಯಗಳು ಈ ವಿಮೆಯಿಂದ ಅತಿಹೆಚ್ಚು ಪ್ರಯೋಜನ ಪಡೆದುಕೊಂಡಿವೆ.
ಚಿಕಿತ್ಸೆ ಏನೇನು?: ಆರ್ಥೋಪೆಡಿಕ್ಸ್, ಕಾರ್ಡಿಯಾಲಜಿ, ಸಿಂಗಲ್ ಸ್ಟೆಂಟ್ ಅಳವಡಿಕೆ, ಸೊಂಟ ಮುರಿತ, ಬೈಪಾಸ್ ಸರ್ಜರಿಗಳಿಗೆ ವಿಮೆ ಹೆಚ್ಚು ಬಳಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.