ಮಲ್ಯ, ನೀರವ್, ಚೋಕ್ಸಿಯಿಂದ ₹792.11 ಕೋಟಿ ವಸೂಲಿ
Team Udayavani, Jul 17, 2021, 8:59 AM IST
ನವದೆಹಲಿ: ದೇಶದ ಬ್ಯಾಂಕ್ ಗಳ ಮೋಸ ಮಾಡಿ ವಿದೇಶಗಳಲ್ಲಿ ತಲೆ ಮರೆಸಿಕೊಂಡಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಷೇರುಗಳ ಮಾರಾಟದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಮತ್ತೆ 792.11 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಿದೆ ಎಂದು ಇಡಿ (ಜಾರಿ ನಿರ್ದೇಶನಾಲಯ) ತಿಳಿಸಿದೆ.
ಈ ಮೂವರ ಆರೋಪಿಗಳ ಆಸ್ತಿ ಮಾರಾಟದಿಂದ 13 ಸಾವಿರದ 109 ಕೋಟಿ ರೂ ವಸೂಲಿಯಾಗಿದೆ ಎಂದು ಇಡಿ ತಿಳಿಸಿದೆ. ಕಿಂಗ್ಫಿಶರ್ ಏರ್ಲೈನ್ಸ್ನ ಮಾಲೀಕ ವಿಜಯ್ ಮಲ್ಯ 9 ಸಾವಿರ ಕೋಟಿ ರೂಪಾಯಿಗಳನ್ನು ಬ್ಯಾಂಕುಗಳಿಗೆ ಕೊಡಬೇಕಿತ್ತು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದ ಆರೋಪಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ 13 ಸಾವಿರ ಕೋಟಿ ರೂಪಾಯಿ ಪಾವತಿಸಬೇಕಿತ್ತು. ಇದಕ್ಕೂ ಮೊದಲು ಎಸ್ ಬಿಐ ನೇತೃತ್ವದ ಒಕ್ಕೂಟವು ಆಸ್ತಿಗಳನ್ನು ಹರಾಜು ಹಾಕುವ ಮೂಲಕ 7 ಸಾವಿರದ 181 ಕೋಟಿ ರೂಪಾಯಿಯನ್ನು ವಸೂಲಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.