ಗುಜರಾತ್: ಕೇಬಲ್ ಸೇತುವೆ ಕುಸಿದು ನದಿಗೆ ಬಿದ್ದ ನೂರಾರು ಮಂದಿ; ರಕ್ಷಣಾ ಕಾರ್ಯ ಚುರುಕು
ಮೊರ್ಬಿ ನಗರದಲ್ಲಿ ಭಾರೀ ದುರಂತ
Team Udayavani, Oct 30, 2022, 8:36 PM IST
ಮೊರ್ಬಿ:ಗುಜರಾತ್‌ನ ಮೊರ್ಬಿ ನಗರದಲ್ಲಿ ಬರೋಬ್ಬರಿ 140 ವರ್ಷ ಹಳೆಯದಾಗಿರುವ ಕೇಬಲ್ ಬ್ರಿಡ್ಜ್ ಕುಸಿದು ಬಿದ್ದು ಕನಿಷ್ಠ 32 ಮಂದಿ ಅಸುನೀಗಿದ್ದಾರೆ. ಆದರೆ, ರಾಜ್‌ಕೋಟ್ ಸಂಸದ ಮೋಹನ್ ಕುಂದಾರಿಯಾ ನೀಡಿದ ಮಾಹಿತಿ ಪ್ರಕಾರ 50 ಮಂದಿ ಅಸುನೀಗಿದ್ದಾರೆ. ಭಾನುವಾರ ಸಂಜೆ 6.30ರ ಈ ಘಟನೆ ನಡೆದಿದೆ.
ದುರಂತ ಸಂಭವಿಸುವ ವೇಳೆ ಬ್ರಿಡ್ಜ್ ನಲ್ಲಿ 500ಕ್ಕೂ ಅಧಿಕ ಮಂದಿ ಇದ್ದರು ಎಂದು ಹೇಳಲಾಗಿದೆ. ಅದು ಕುಸಿದು ಬಿದ್ದ ವೇಳೆ 100 ಮಂದಿ ನೀರು ಪಾಲಾಗಿದ್ದಾರೆ. 40 ಮಂದಿಯನ್ನು ಸ್ಥಳದಲ್ಲೇ ಇದ್ದವರು ಪಾರು ಮಾಡಿದ್ದಾರೆ.
ಕುಸಿದು ಬಿದ್ದ ಕೇಬಲ್ ಬ್ರಿಡ್ಜ್ ಅನ್ನು ಹಿಡಿದುಕೊಂಡು ನೇತಾಡುತ್ತಿದ್ದ ಹತ್ತು ಮಂದಿಯನ್ನು ಪಾರು ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಎರಡು ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿವೆ. ದುರಂತದ ಬಗ್ಗೆ ಮಾಹಿತಿ ದೊರೆಯುತ್ತಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವೈದ್ಯರು ಮತ್ತು ಸಿಬ್ಬಂದಿಯ ಸ್ಥಳಕ್ಕೆ ಧಾವಿಸಿದ್ದಾರೆ.
ಮುಕ್ತಗೊಂಡಿತ್ತು
ಕೇವಲ ನಾಲ್ಕು ದಿನಗಳ ಹಿಂದಷ್ಟೇ ಬ್ರಿಟೀಷರ ಕಾಲದಲ್ಲಿ ನಿರ್ಮಿಸಲಾಗಿದ್ದ ಕೇಬಲ್ ಬ್ರಿಡ್ಜ್ ಅನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಬಳಕೆಗಾಗಿ ಮುಕ್ತಗೊಳಿಸಲಾಗಿತ್ತು. “ಕಳೆದ ವಾರವಷ್ಟೇ ಅದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ಅದು ಕುಸಿದು ಬಿದ್ದಿರುವುದರಿಂದ ಆಘಾತ ಉಂಟಾಗಿದೆ. ಅದರ ಸಂಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಲಿದೆ’ ಗುಜರಾತ್‌ನ ಉದ್ಯೋಗ ಮತ್ತು ಕಾರ್ಮಿಕ ಸಚಿವ ಬೃಜೇಶ್ ಮೆರ್ಜಾ ಹೇಳಿದ್ದಾರೆ.
ಪ್ರಮುಖರ ಶೋಕ
ಸದ್ಯ ಗುಜರಾತ್ ಪ್ರವಾಸದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿ ಘಟನೆಗೆ ದುಃಖ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜತೆಗೆ ಮಾತನಾಡಿ ಅಗತ್ಯ ನೆರವು ನೀಡುವ ವಾಗ್ಧಾನ ಮಾಡಿದ್ದಾರೆ. ಅಸುನೀಗಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನೂ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖರು ದುಖ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.