ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸಂಸದ ಅಸಾದುದ್ದೀನ್ ಓವೈಸಿ ಸಂಬಂಧಿ
Team Udayavani, Feb 28, 2023, 8:56 AM IST
ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರ ಸಂಬಂಧಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ (ಫೆ.27 ರಂದು) ನಡೆದಿದೆ.
ವೃತ್ತಿಯಲ್ಲಿ ಮೂಳೆ ತಜ್ಞನಾಗಿದ್ದ ಮಜರುದ್ದೀನ್ ಅಲಿ ಖಾನ್ ತಮ್ಮ ಗನ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಜರುದ್ದೀನ್ ಓವೈಸಿ ಅವರ ಎರಡನೇ ಮಗಳ ಮಾವನಾಗಿದ್ದರು.
ಗುಂಡು ಹಾರಿಸಿಕೊಂಡ ಅವರನ್ನುಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: ಎನ್ ಕೌಂಟರ್ ಮಾಡಿ ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ
ಸೋಮವಾರ ಮಧ್ಯಾಹ್ನ 1 ಗಂಟೆಯ ವೇಳೆ ಮಜರುದ್ದೀನ್ ತಮ್ಮ ಲೈಸೆನ್ಸ್ ವುಳ್ಳ ಗನ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಆಸ್ತಿ ವಿಚಾರವಾಗಿ ಕುಟುಂಬ ಸದಸ್ಯರು ಮತ್ತು ಮೃತರ ನಡುವೆ ಜಗಳ ನಡೆಯುತ್ತಿತ್ತು.ಈ ಹಿಂದೆ ಅವರ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣವೂ ದಾಖಲಾಗಿತ್ತು. ಗನ್ ವಶಪಡಿಸಿಕೊಂಡಿದ್ದು, ಆತ್ಮಹತ್ಯೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೈದರಾಬಾದ್ ಪಶ್ಚಿಮ ವಲಯ ಡಿಸಿಪಿ ಜೋಯಲ್ ಡೇವಿಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.