Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ
Team Udayavani, May 26, 2024, 9:11 PM IST
ಹೊಸದಿಲ್ಲಿ: ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ ದೆಹಲಿ ಪೊಲೀಸರು ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲಕ ಮತ್ತು ವೈದ್ಯರನ್ನು ಭಾನುವಾರ ಬಂಧಿಸಿದ್ದಾರೆ.
ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲಕ ಡಾ.ನವೀನ್ ಖಿಚಿ ಮತ್ತು ಘಟನೆಯ ಸಮಯದಲ್ಲಿ ಆಸ್ಪತ್ರೆಯ ಪಾಳಿಯಲ್ಲಿದ್ದ ಡಾ.ಆಕಾಶ್ (25) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಹೃದಯ ವಿದ್ರಾವಕ ಘಟನೆಯ ನಂತರ ಆಸ್ಪತ್ರೆಯ ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಪ್ರಧಾನಿ ಕಾರ್ಯಾಲಯವು ಏಳು ಶಿಶುಗಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡ ಶಿಶುಗಳ ಕುಟುಂಬಕ್ಕೆ 50,000 ರೂ. ಪರಿಹಾರವನ್ನು ಘೋಷಿಸಿದೆ.
‘ಘಟನೆ ಹೃದಯವಿದ್ರಾವಕವಾಗಿದೆ. ಅಮಾಯಕ ಮಕ್ಕಳನ್ನು ಕಳೆದುಕೊಂಡವರ ಜತೆ ನಾವೆಲ್ಲರೂ ನಿಂತಿದ್ದೇವೆ. ಘಟನಾ ಸ್ಥಳದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ಸರ್ಕಾರ ಮತ್ತು ಆಡಳಿತ ಅಧಿಕಾರಿಗಳು ನಿರತರಾಗಿದ್ದಾರೆ. ಘಟನೆಗೆ ಕಾರಣಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಈ ನಿರ್ಲಕ್ಷ್ಯಕ್ಕೆ ಕಾರಣರಾದವರನ್ನು ಬಿಡುವುದಿಲ್ಲ’ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.