ಸಿಕ್ಕಿಂ ಮುಖ್ಯಮಂತ್ರಿಯಾಗಿ ಎಸ್‌ಕೆಎಂ ಅಧ್ಯಕ್ಷ ಪಿ ಎಸ್ ಗೋಲೆ ಪ್ರಮಾಣ ವಚನ
Team Udayavani, May 27, 2019, 11:17 AM IST
ಗ್ಯಾಂಗ್‌ಟೋಕ್ : ಪಿ ಎಸ್ ಗೋಲೆ ಎಂದೇ ಜನಪ್ರಿಯರಾಗಿರುವ 51ರ ಹರೆಯದ, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಅಧ್ಯಕ್ಷ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಸೋಮವಾರ ಬೆಳಗ್ಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಲ್ಲಿನ ಪಾಲ್‌ಜೊರ್ ಸ್ಟೇಡಿಯಂ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಗಂಗಾ ಪ್ರಸಾದ್ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು.
ಗೋಯಲ್ ಅವರು ಪ್ರಕೃತ ರಾಜ್ಯ ವಿಧಾನಸಭೆಯ ಸದಸ್ಯರಲ್ಲ; ಅವರು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಗೋಲೇ ಅವರು ನೇಪಾಲೀ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ ಸಮಾರಂಭದಲ್ಲಿ ನೆರೆದಿದ್ದ ಅವರ ಸಹಸ್ರಾರು ಬೆಂಬಲಿಗರು ಮುಗಿಲು ಮುಟ್ಟುವ ಹರ್ಷೋದ್ಗಾರಗೈದರು.
ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಶಾಮ್ಲಿಂಗ್ ಮತ್ತು ಹಿರಿಯ ಸಿಕ್ಕಿಂ ಡೆಮೋಕ್ರಾಟಿಕ್ ಫ್ರಂಟ್ (ಎಸ್‌ಡಿಎಫ್) ಇದರ ನಾಯಕರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
2013ರಲ್ಲಿ ಸ್ಥಾಪನೆಗೊಂಡ ಎಸ್‌ಕೆಎಂ ಪಕ್ಷ 32 ಸದಸ್ಯ ಬಲದ ಸಿಕ್ಕಿಂ ವಿಧಾನಸಭೆಯಲ್ಲಿ 17 ಸೀಟುಗಳನ್ನು ಜಯಿಸಿ ಅಧಿಕಾರಕ್ಕೆ ಬಂದಿದೆ. ನಿಕಟ ಪ್ರತಿಸ್ಪರ್ಧಿ ಎಸ್‌ಡಿಎಫ್ 15 ಸೀಟುಗಳನ್ನು ಜಯಿಸಿದೆ.
ಶಾಮ್ಲಿಂಗ್ ಸರಕಾರವನ್ನು ಎಸ್‌ಕೆಎಂ 24 ವರ್ಷಗಳ ಬಳಿಕ ಪದಚ್ಯುತಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.