ಕೇರಳದಲ್ಲಿ 7.62 ಎಂಎಂ ಅಳತೆಯ ಪಾಕ್ ಬುಲೆಟ್ ಪತ್ತೆ!
Team Udayavani, Feb 24, 2020, 6:50 AM IST
ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯ ಕುಳತ್ತುಪುಳದಲ್ಲಿ 7.62 ಎಂಎಂ ಅಳತೆಯ 14 ಸಜೀವ ಗುಂಡುಗಳು ದೊರೆತಿದ್ದು, ಅವು ಪಾಕಿಸ್ಥಾನದಿಂದ ಬಂದಿವೆ ಎಂಬ ಬಲವಾದ ಅನುಮಾನವನ್ನು ಕೇರಳ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಈಗ ದೊರೆತಿರುವ ಎಲ್ಲ ಗುಂಡುಗಳ ಮೇಲೆ “ಪಿಒಎಫ್’ (ಪಾಕಿಸ್ಥಾನ್ ಆರ್ಡಿನೆನ್ಸ್ ಫ್ಯಾಕ್ಟರೀಸ್) ಎಂಬ ಗುರುತಿರುವುದು ಈ ಅನುಮಾನಕ್ಕೆ ಕಾರಣ ವಾಗಿದೆ. ಈ ಆಘಾತಕಾರಿ ಬೆಳವಣಿಗೆಯ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಲು ಉಗ್ರ ನಿಗ್ರಹ ದಳದ ಡಿಐಜಿ ನೇತೃತ್ವದಲ್ಲಿ ಕೇಂದ್ರ ಮತ್ತು ಇತರ ರಾಜ್ಯಗಳ ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.
ತಮಿಳುನಾಡು ಗಡಿ ಭಾಗದಿಂದ 60 ಕಿ.ಮೀ. ದೂರದಲ್ಲಿರುವ ಕುಳತ್ತುಪುಳದ ಸೇತುವೆ ಮೇಲೆ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳಿಗೆ ಅನುಮಾನಾಸ್ಪದ ಕವರ್ ಒಂದು ದೊರೆತಿದ್ದು, ಅದರೊಳಗೆ ಗುಂಡುಗಳಿದ್ದವು. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ ಸ್ಥಳೀಯ ಪೊಲೀಸರು ಸಜೀವ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬುಲೆಟ್‌ಗಳನ್ನು ಲಾಂಗ್-ರೇಂಜ್ ರೈಫಲ್‌ಗಳಲ್ಲಿ ಬಳಸಲಾಗುತ್ತದೆ ಎಂದು ಡಿಜಿಪಿ ಲೋಕನಾಥ್ ಬೆಹೆರಾ ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಯನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ನೀಡಲಾಗಿದೆ. ವಿವಿಧ ರಾಜ್ಯಗಳ ಜತೆಗೂ ಚರ್ಚಿಸಿ ತನಿಖಾ ತಂಡ ರಚಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದು, ಕೇರಳ ದೊಂದಿಗೆ ಗಡಿ ಹಂಚಿಕೊಂಡಿರುವ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳು ತನಿಖಾ ತಂಡದಲ್ಲಿರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.