SAARC ಸಭೆಯಲ್ಲಿ ತಾಲಿಬಾನ್ ಭಾಗವಹಿಸುವಂತೆ ಪಾಕ್ ಮನವಿ : ಸಭೆಯೇ ರದ್ದು
Team Udayavani, Sep 22, 2021, 8:26 AM IST
ನವದೆಹಲಿ : ಇದೇ ಶನಿವಾರ (ಸೆಪ್ಟೆಂಬರ್ 25ರಂದು) ನಿಗದಿಯಾಗಿದ್ದ ಸಾರ್ಕ್(South Asian Association for Regional Cooperation) ವಿದೇಶಾಂಗ ಮಂತ್ರಿಗಳ ಸಭೆ ರದ್ದುಗೊಂಡಿದೆ. ಅಫ್ಘಾನಿಸ್ತಾನ ಸಾರ್ಕ್ ನಲ್ಲಿ ಪ್ರತಿನಿಧಿಸಲು ತಾಲಿಬಾನ್ಗೆ ಅನುಮತಿ ನೀಡುವಂತೆ ಪಾಕಿಸ್ತಾನ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಭೆಯನ್ನೇ ರದ್ದುಗೊಳಿಸಲಾಗಿದೆ ಎಂದು ನೇಪಾಳ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮೂಲಗಳ ಪ್ರಕಾರ ಸಾರ್ಕ್ ಸಭೆಯಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಪ್ರತಿನಿಧಿಸಬೇಕೆಂದು ಕೇಳಿದೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿಸಿವೆ. ಭಾರತ ಸೇರಿದಂತೆ ಇತರ ಕೆಲವು ಸದಸ್ಯ ದೇಶಗಳು ಈ ಪಾಕಿಸ್ತಾನದ ಮನವಿಯನ್ನ ವಿರೋಧಿಸಿವೆ. ಈ ಕಾರಣ ಒಮ್ಮತದ ಕೊರತೆಯಿಂದಾಗಿ ಸಭೆಯನ್ನು ರದ್ದುಗೊಳಿಸಲಾಗಿದೆ.
ಅಮೀರ್ ಖಾನ್ ಮುಟ್ಟಾಕಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನೇತೃತ್ವದ ಸರ್ಕಾರದ ಹಂಗಾಮಿ ವಿದೇಶಾಂಗ ಸಚಿವರಾಗಿದ್ದಾರೆ. ಮತ್ತೊಂದು ಅಂಶ ಎಂದರೆ ತಾಲಿಬಾನ್ ಸರ್ಕಾರವನ್ನು ಭಾರತವು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ. ಕಾಬೂಲ್ ನಲ್ಲಿನ ಹೊಸ ಆಡಳಿತವನ್ನು ಯಾವ ದೇಶವೂ ಒಪ್ಪಿಕೊಂಡಿಲ್ಲ. ಅಲ್ಲದೆ ಕಾಬುಲ್ ಕ್ಯಾಬಿನೆಟ್ ಮಂತ್ರಿಗಳನ್ನು ಯುಎನ್ ಕಪ್ಪುಪಟ್ಟಿಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.