ಪಾಕಿಸ್ತಾನದಲ್ಲಿ 72 ವರ್ಷಗಳ ಬಳಿಕ ತೆರೆದ ಪುರಾತನ ಹಿಂದೂ ದೇವಾಲಯ!
Team Udayavani, Jul 29, 2019, 5:10 PM IST
ಇಸ್ಲಾಮಾಬಾದ್: ಸುಮಾರು 72 ವರ್ಷಗಳ ನಂತರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್ ಕೋಟ್ ನಲ್ಲಿರುವ ಪುರಾತನ ಹಿಂದೂ ದೇವಾಲಯವನ್ನು ತೆರೆಯುವ ಮೂಲಕ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದಾಗಿ ವರದಿ ತಿಳಿಸಿದೆ.
ಇಲ್ಲಿನ ಹಿಂದೂ ಸಮುದಾಯದ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಲಾಗಿದ್ದು, ಶಾವಾಲಾ ತೇಜ್ ಸಿಂಗ್ ದೇವಾಲಯವನ್ನು ಇತ್ತೀಚೆಗೆ ಮತ್ತೆ ತೆರೆದಿದ್ದು, ಹಿಂದೂ ಸಂಪ್ರದಾಯದಂತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿಕೊಟ್ಟಿರುವುದಾಗಿ ದ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಪುರಾತನ ಶಾವಾಲಾ ತೇಜ್ ಸಿಂಗ್ ದೇವಾಲಯವನ್ನು ತೆರೆಯುವಂತೆ ಹಲವಾರು ವರ್ಷಗಳಿಂದ ಹಿಂದೂ ಸಮುದಾಯ ಬೇಡಿಕೆ ಸಲ್ಲಿಸಿರುವುದಾಗಿ ಸೈಯದ್ ಅಬ್ಬಾಸ್ ತಿಳಿಸಿದ್ದಾರೆ.
ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. ಇಲ್ಲಿನ ಹಿಂದೂ ದೇವರ ಮೂರ್ತಿಯನ್ನು ಭಾರತದಿಂದ ತರಲಾಗಿತ್ತು ಎಂದು ಅಬ್ಬಾಸ್ ಮಾಹಿತಿ ನೀಡಿದ್ದಾರೆ. ಭಾರತ, ಪಾಕಿಸ್ತಾನ ಇಬ್ಬಾಗವಾದ ನಂತರ ಈ ದೇವಾಲಯ ಬಂದ್ ಆಗಿದ್ದು, ಇದೀಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ದೇಶನದ ಮೇರೆಗೆ ದೇವಾಲಯವನ್ನು ಮತ್ತೆ ತೆರೆಯಲಾಗಿದೆ ಎಂದು ಅಬ್ಬಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.