Uri sector; ಉಗ್ರರ ಗಡಿ ನುಸುಳುವಿಕೆಗೆ ಪಾಕಿಸ್ತಾನ ಸೇನೆ ಬೆಂಬಲ; ಗಡಿಯಲ್ಲಿ ಗುಂಡಿನ ಚಕಮಕಿ
Team Udayavani, Sep 16, 2023, 6:19 PM IST
ಹೊಸದಿಲ್ಲಿ: ಲೈನ್ ಆಫ್ ಕಂಟ್ರೋಲ್ ನಲ್ಲಿ ಉಗ್ರರ ಒಳನುಸುಳುವಿಕೆ ತಪ್ಪಿಸಲು ಯತ್ನಿಸುತ್ತಿದ್ದ ವೇಳೆ ಪಾಕಿಸ್ತಾನ ಸೇನೆಯು ಉಗ್ರರಿಗೆ ಕಾವಲು ನಿಂತು, ನಮ್ಮ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.
ಉರಿ ಸೆಕ್ಟರ್ ನಲ್ಲಿ ಮೂರ್ನಾಲ್ಕು ಭಯೋತ್ಪಾದಕರು ಒಳನುಸುಳಲು ಯತ್ನಿಸಿದ ನಂತರ ಗುಂಡಿನ ಚಕಮಕಿಯು ಎರಡು ಗಂಟೆಗಳ ಕಾಲ ನಡೆಯಿತು ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಳನುಸುಳುವ ಭಯೋತ್ಪಾದಕರನ್ನು ತಟಸ್ಥಗೊಳಿಸಲು ಸೇನೆಯು ರಾಕೆಟ್ ಲಾಂಚರ್ ಗಳು ಮತ್ತು ಇತರ ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿತು ಎಂದು ಅವರು ಹೇಳಿದರು.
ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲು ಗುಪ್ತಚರ ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೀರ್ ಪಂಜಾಲ್ ಬ್ರಿಗೇಡ್ ನ ಕಮಾಂಡರ್ ಬ್ರಿಗೇಡಿಯರ್ ಪಿಎಂಎಸ್ ಧಿಲ್ಲೋನ್ ಹೇಳಿದ್ದಾರೆ.
ಇದನ್ನೂ ಓದಿ:Keerthy Suresh: ಅನಿರುದ್ಧ್ ಜೊತೆ ʼಮಹಾನಟಿʼ ಕೀರ್ತಿ ಮದುವೆ? ಮೌನ ಮುರಿದ ನಟಿಯ ತಂದೆ
“ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅದೇ ವೇಳೆ ಒಬ್ಬ ಉಗ್ರ ಗಾಯಗೊಂಡಿದ್ದು, ಪಾಕಿಸ್ತಾನ ಸೇನೆಯ ಸಹಾಯದಿಂದ ಆತ ತಪ್ಪಿಸಿಕೊಂಡಿದ್ದಾನೆ” ಎಂದು ಹೇಳಿದ್ದಾರೆ.
“ಪಾಕಿಸ್ತಾನ ಸೇನೆಯು ಗಾಯಗೊಂಡ ಭಯೋತ್ಪಾದಕನಿಗೆ ಗುಂಡಿನ ಬೆಂಬಲವನ್ನು ನೀಡಿತು. ಅಲ್ಲದೆ ನಮ್ಮ ಮೇಲೂ ಗುಂಡು ಹಾರಿಸಿರುತು. ಪಾಕಿಸ್ತಾನದ ಸೇನೆಯು ನಮ್ಮ ಕ್ವಾಡ್ ಕ್ಯಾಪ್ಟರ್ ಗಳ ಮೇಲೂ ಗುಂಡು ಹಾರಿಸಿತು” ಎಂದು ಬ್ರಿಗೇಡಿಯರ್ ಧಿಲ್ಲೋನ್ ಹೇಳಿದ್ದಾರೆ.
ಇಬ್ಬರು ಭಯೋತ್ಪಾದಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.