ಯುಪಿ ಫಲಿತಾಂಶ ಪಾಕ್, ಬಾಂಗ್ಲಾದೇಶಕ್ಕೆ ನಡುಕ ಹುಟ್ಟಿಸಲು ಕಾರಣವೇನು?
Team Udayavani, Mar 12, 2017, 3:33 PM IST
ನವದೆಹಲಿ:ಉತ್ತರಪ್ರದೇಶ ಚುನಾವಣೆಯ ಫಲಿತಾಂಶದಿಂದಾಗಿ ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳಲಿರುವ ನೀತಿ, ನಿಲುವು ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಸರ್ಕಾರದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆ ಮೂಡುತ್ತಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ. ಅದಕ್ಕೆ ಕಾರಣ ಕೆಲವು ಊಹಾಪೋಹಗಳ ಪ್ರಕಾರ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಉತ್ತರಪ್ರದೇಶ ಚುನಾವಣೆಗಾಗಿ ಕಾಯುತ್ತಿತ್ತು ಎಂಬುದು!
ಉರಿ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ತೀರ ಹದಗೆಟ್ಟಿತ್ತು. ಅಲ್ಲದೇ ಭಾರತೀಯ ಸೇನೆ ದಿಢೀರ್ ಆಗಿ ಪಿಒಕೆಗೆ ನುಗ್ಗಿ ಸರ್ಜಿಕಲ್ ದಾಳಿ ನಡೆಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯ ಅಲೆ ಎಬ್ಬಿಸಿತ್ತು. ಇದೀಗ ಪಂಚರಾಜ್ಯಗಳ ಚುನಾವಣೆಯಲ್ಲಿ ದೇಶದ ಬಹುದೊಡ್ಡ ರಾಜ್ಯವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಬೇರಿ ಬಾರಿಸಿದೆ. ಜೊತೆಗೆ ವಿಪಕ್ಷಗಳು ಧೂಳೀಪಟವಾಗಿದೆ.
ಉತ್ತರಪ್ರದೇಶದ ಐತಿಹಾಸಿಕ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತಷ್ಟು ಬಲ ತಂದಿದ್ದು, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದಂತೆ ಕಠಿಣ ನಿರ್ಧಾರ ಕೈಗೊಳ್ಳುವುದಕ್ಕೆ ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.