ಕಳೆದ 10 ತಿಂಗಳಲ್ಲಿ 2,500 ಭಾರೀ ಕದನ ವಿರಾಮ ಉಲ್ಲಂಘಿಸಿದ ಪಾಕ್: ಬೆಚ್ಚಿ ಬೀಳಿಸಿದ ವರದಿ
Team Udayavani, Nov 17, 2019, 8:13 AM IST
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಪಾಕ್ ತನ್ನ ದುಷ್ಕೃತ್ಯವನ್ನು ಮುಂದುವರಿಸಿದ್ದು 2019ರ ಜನವರಿಯಿಂದ ನವೆಂಬರ್ 15 ರವರೆಗೆ ಗಡಿ ನಿಯಂತ್ರಣ ರೇಖೆಯ ಬಳಿ (LOC) 2,500 ಕ್ಕೂ ಹೆಚ್ಚು ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ವರದಿಯಾಗಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ ಲಡಾಕ್ ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ನಂತರ ಅತೀ ಹೆಚ್ಚು ಭಾರೀ ಕದನ ವಿರಾಮ ಉಲ್ಲಂಘಿಸಲಾಗಿದೆ. ಆದರೇ ಕಣಿವೆ ರಾಜ್ಯದಲ್ಲಿ ಅಶಾಂತಿಯನ್ನು ಉಂಟುಮಾಡುವ ಪಾಕ್ ನ ಎಲ್ಲಾ ಪ್ರಯತ್ನಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಅಕ್ಟೋಬರ್‌ನಲ್ಲಿಯೇ 350ಕ್ಕೂ ಹೆಚ್ಚು ಭಾರೀ ಕದನ ವಿರಾಮ ಉಲ್ಲಂಘನೆಯಾಗಿದ್ದು, ಇದು ಕಳೆದ 10 ತಿಂಗಳಲ್ಲಿಯೇ ಅತಿ ಹೆಚ್ಚು ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನವೆಂಬರ್ ತಿಂಗಳ ಮೊದಲ 11 ದಿನಗಳಲ್ಲಿ 97 ಭಾರೀ ಕದನ ವಿರಾಮ ಉಲ್ಲಂಘನೆ ಮಾಡಿ ಪಾಕ್ ತನ್ನ ಪುಂಡಾಟ ಮೆರೆದಿದೆ.
ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಲ್ಲಿ ಭಾರತೀಯ ನಾಗರಿಕರನ್ನು ತಮ್ಮ ಪ್ರಮುಖ ಗುರಿಗಳನ್ನಾಗಿ ಮಾಡಿ ಗುಂಡಿನ ದಾಳಿ ನಡೆಸುತ್ತಿದೆ. ಒಂದೇ ದಿನದಲ್ಲಿ 10ಕ್ಕೂ ಹೆಚ್ಚು ಭಾರೀ ಶೆಲ್ ದಾಳಿ ನಡೆಸಿದ ುದಾಹರಣೆಗಳು ಇವೆ. ಹಿರಾನಗರ, ಅಖ್ನೂರ್, ಸುಂದರಬಾನಿ, ನೌಶೇರಾ, ರಾಜೌರಿ, ಮೆಂಧರ್, ಪೂಂಚ್, ಉಡಿ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಸತತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.