ಶ್ರೀನಗರ-ಶಾರ್ಜಾ ವಿಮಾನ ಹಾರಾಟಕ್ಕೆ ತಗಾದೆ ತೆಗೆದ ಪಾಕ್
Team Udayavani, Nov 4, 2021, 6:30 AM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ ಅರಬ್ ಸಂಯುಕ್ತ ಸಂಸ್ಥಾನದ ಶಾರ್ಜಾಗೆ ಇತ್ತೀಚೆಗಷ್ಟೇ ಹಾರಾಟ ಆರಂಭಿಸಿದ್ದ ಗೋ ಫಸ್ಟ್ ವಿಮಾನ ಸಂಸ್ಥೆಯ ವಿಮಾನಗಳಿಗೆ ತನ್ನ ವಾಯುಪ್ರದೇಶದಲ್ಲಿ ಹಾರಾಟ ನಡೆಸುವುದಕ್ಕೆ ಪಾಕಿಸ್ತಾನ ಅನುಮತಿ ನಿರಾಕರಿಸಿದೆ.
ಶ್ರೀನಗರದಿಂದ ಹೊರಡುತ್ತಿರುವ ವಿಮಾನಗಳು ಪಾಕಿಸ್ತಾನದ ಏರೋಸ್ಪೇಸ್ ಮಾರ್ಗವಾಗಿ ಶಾರ್ಜಾಗೆ ತೆರಳುತ್ತಿವೆ. ಅಕ್ಟೋಬರ್‌ನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಈ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದ್ದರು. ಆದರೆ ಇದೀಗ ತಮ್ಮ ವಾಯುಪ್ರದೇಶದಲ್ಲಿ ವಿಮಾನಗಳ ಹಾರಾಟ ನಡೆಸದಂತೆ ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯಕ್ಕೆ ಪಾಕ್ ಹೇಳಿದೆ.
ಇದನ್ನೂ ಓದಿ:ಕ್ಲಬ್‌ಹೌಸ್: ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಿಗೆ ಆದ್ಯತೆ
ಪಾಕಿಸ್ತಾನದ ಬದಲು ಬೇರೆ ಮಾರ್ಗದಲ್ಲಿ ಶಾರ್ಜಾಗೆ ಹೋಗುವುದರಿಂದ ಒಂದು ಗಂಟೆ ಹೆಚ್ಚುವರಿ ಸಮಯ ಬೇಕಾಗಲಿದ್ದು, ಟಿಕೆಟ್ ದರವೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿಂದೆ 2009ರಲ್ಲಿ ಶ್ರೀನಗರ-ದುಬೈ ಮಾರ್ಗದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೂ ಪಾಕ್ ಇದೇ ರೀತಿ ತಗಾದೆ ತೆಗೆದಿದ್ದು, ಆ ಮಾರ್ಗವನ್ನೇ ಸ್ಥಗಿತಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.