ನಿಲ್ಲದ ಪಾಕ್ ಹಸಿ ಸುಳ್ಳು
Team Udayavani, Sep 23, 2021, 6:50 AM IST
ಹೊಸದಿಲ್ಲಿ/ಶ್ರೀನಗರ: ಭಾರತದ ವರ್ಚಸ್ಸಿಗೆ ಧಕ್ಕೆ ತರುವ ಯಾವುದೇ ಅವಕಾಶವನ್ನು ಪಾಕಿಸ್ಥಾನ ಬಿಡುವುದಿಲ್ಲ. ಆದರೆ ಆ ರೀತಿ ನಡೆದುಕೊಳ್ಳಲು ಹೋಗಿ ಮುಖಭಂಗಕ್ಕೆ ಒಳಗಾಗುವುದು ಸಾಮಾನ್ಯ. ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರು ಅಸಂಖ್ಯಾತ ಜನರನ್ನು ಕೊಂದಿದ್ದಾರೆ ಎಂದು ಆರೋಪಿಸಿದೆ.
ಜತೆಗೆ ಅರೆಸುಟ್ಟ ದೇಹಗಳ ಫೋಟೋಗಳನ್ನು ಅಂತಾ ರಾಷ್ಟ್ರೀಯ ಸಮುದಾಯಕ್ಕೆ ನೀಡಿದೆ. ಒಟ್ಟು 153 ಪುಟಗಳ ವರದಿಯಲ್ಲಿ ಈ ಸುಳ್ಳಿನ ಸರಮಾಲೆಯನ್ನು ಪೋಣಿಸಿದೆ.
2017 ಜು.4ರಂದು ಪುಲ್ವಾಮಾದಲ್ಲಿ ದೇಶದ ಯೋಧರು ವ್ಯಕ್ತಿಯೊಬ್ಬನನ್ನು ಕೊಂದಿದ್ದಾರೆ ಎಂದು ಆ ವರದಿಯಲ್ಲಿ ಆರೋಪಿಸಲಾಗಿದೆ. ಭಾರತದ ಯೋಧರು ಪುಲ್ವಾಮಾದ ಬಹಮನೂ ಎಂಬ ಪ್ರದೇಶ ದಲ್ಲಿ ರಾಸಾಯನಿಕ ಅಸ್ತ್ರಗಳನ್ನು ಪ್ರಯೋಗಿಸಿದ್ದಾರೆ ಎಂಬ ವ್ಯರ್ಥಾರೋಪವನ್ನೂ ಮಾಡಿದೆ ನೆರೆಯ ರಾಷ್ಟ್ರ. ಅದನ್ನು ಪುಷ್ಟೀಕರಿಸುವ ನಿಟ್ಟಿನಲ್ಲಿ ಎರಡು ಗುರುತು ಸಿಗದ ಫೋಟೋಗಳನ್ನೂ ಪಾಕಿಸ್ಥಾನ ಸರಕಾರ ಬಿಡು ಗಡೆ ಮಾಡಿದೆ. “ಅದು ಜಹಾಂಗಿರ್ ಖಂಡಿ ಮತ್ತು ಕಿಫಾಯತ್ ಅಹ್ಮದ್ ಎಂಬವರ ಸುಟ್ಟು ಹೋದ ಮೃತದೇಹ’ ಎಂಬ ಶೀರ್ಷಿಕೆಯನ್ನೂ ಕೊಡಲಾಗಿದೆ.
ತಮಾಷೆಯೆಂದರೆ, ಅದೇ ಫೋಟೋಗಳು ಹಿಂದಿನ ಹಲವು ಸಂದರ್ಭಗಳಲ್ಲಿ ಇಂಟರ್‌ನೆಟ್‌ನಲ್ಲಿ ಲಭ್ಯವಾಗಿದ್ದವು. ಟರ್ಕಿಯ ಕುದ್ì ನಾಗರಿಕರ ಮೇಲೆ ನಡೆದ ದಾಳಿಯ ಮಾದರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜನರ ಮೇಲೆ ಭಾರತದ ಯೋಧರು ದಾಳಿ ನಡೆಸುತ್ತಿದ್ದಾರೆ ಎಂದು 2011ರಲ್ಲಿಯೂ ಪಾಕ್ ಸರಕಾರ ಆರೋಪಿಸಿತ್ತು. ಅದೇ ಸಂದರ್ಭದಲ್ಲಿಯೂ ಇದೇ ಫೋಟೋಗಳನ್ನು ಬಳಕೆ ಮಾಡಲಾಗಿತ್ತು. 2009ರಲ್ಲಿ ಗಾಜಾ ಪಟ್ಟಿಯಲ್ಲಿ ಅಸುನೀಗಿದವರ ಫೋಟೋಗಳನ್ನು ಮುಂದಿಟ್ಟುಕೊಂಡು ಭಾರತ ಸರಕಾರದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಯಿ ಲೆಬ್ಬಿಸುವ ಪ್ರಯತ್ನವನ್ನೂ ಪಾಕಿಸ್ಥಾನ ನಡೆಸಿತ್ತು.
ಹಿಜ್ಬುಲ್ ಮುಜಾಹಿದೀನ್ ಉಗ್ರರು ಬಹಮನೂ ಎಂಬಲ್ಲಿ ನಡೆಸಿದ ಜನರ ಹತ್ಯೆಯ ಬಗ್ಗೆ ಪಾಕಿಸ್ಥಾನ ಸರಕಾರ ಮೌನವಾಗಿ ಉಳಿದ್ದದ್ದು ಮಾತ್ರವಲ್ಲದೆ ಅದು ಬಿಡುಗಡೆ ಮಾಡಿರುವ ವರದಿಯಲ್ಲೂ ಉಲ್ಲೇಖವೇ ಇಲ್ಲ.
ಉಗ್ರ ಸಂಪರ್ಕ: ಮತ್ತೆ ಆರು ಮಂದಿ ವಜಾ:
ಉಗ್ರರ ಜತೆಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಆರು ಮಂದಿ ಸರಕಾರಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ಈ ಶಿಕ್ಷೆಗೆ ಗುರಿಯಾದವರಲ್ಲಿ ಇಬ್ಬರು ಪೊಲೀಸರೂ ಸೇರಿದ್ದಾರೆ. ಹೀಗಾಗಿ, ಆರು ತಿಂಗಳ ಅವಧಿಯಲ್ಲಿ ಉಗ್ರರ ಜತೆಗೆ ಲಿಂಕ್ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಜಾಗೊಂಡ ಸರಕಾರಿ ನೌಕರರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಜು.11ರಂದು ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸಯ್ಯದ್ ಸಲಾವುದ್ದೀನ್‌ನ ಇಬ್ಬರು ಪುತ್ರರು ಸೇರಿದಂತೆ 11 ಮಂದಿ ಸರಕಾರಿ ಉದ್ಯೋಗಿಗಳನ್ನು ವಜಾ ಮಾಡಲಾಗಿತ್ತು. ಎಪ್ರಿಲ್-ಮೇನಲ್ಲಿ ಡಿಎಸ್‌ಪಿ ದವೀಂದರ್ ಸಿಂಗ್ ಸೇರಿದಂತೆ ಏಳು ಮಂದಿಗೆ ಗೇಟ್‌ಪಾಸ್ ನೀಡಲಾಗಿತ್ತು.
ಬಾಂಬ್ ನಿಷ್ಕ್ರಿಯ:
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ಯಲ್ಲಿ ನಾಲ್ಕು ಬಾಂಬ್‌ಗಳನ್ನು ನಿಷ್ಕ್ರಿಯಗೊಳಿ ಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ 10,500 ರೂ. ನಗದು ಮೊತ್ತ ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ, ಬಾರಾಮುಲ್ಲಾ ಜಿಲ್ಲೆಯಲ್ಲಿ ಯೋಧರೊ ಬ್ಬರು ಗುಂಡು ಹಾರಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡಿದ್ದಾನೆ ಮತ್ತು ಅವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.