ಪ್ರವಾಹ ಭೀತಿಯಲ್ಲಿ ಪಂಜಾಬ್
Team Udayavani, Aug 26, 2019, 5:57 AM IST
ನವದೆಹಲಿ: ಸಟ್ಲೆಜ್ ನದಿಯಲ್ಲಿನ ನೀರಿನ ಪ್ರಮಾಣ ಹೆಚ್ಚಾಗಿರುವ ಪರಿಣಾಮ, ಪಾಕಿಸ್ತಾನವು ಭಾರತದ ಪಂಜಾಬ್‌ಗ ಹತ್ತಿರವಿರುವ ತನ್ನ ಗಡಿಯೊಳಗಿನ ಅಣೆಕಟ್ಟಿನಿಂದ ಅಪಾರ ಪ್ರಮಾಣದ ನೀರನ್ನು ಹರಿಬಿಟ್ಟಿದೆ. ಇದರ ಪರಿಣಾಮ, ಪ್ರವಾಹದ ಮೊದಲ ಭೀತಿ ಗಡಿಯಲ್ಲಿನ ತೆಂಡಿವಾಲಾಕ್ಕೆ ಆವರಿಸಿದೆ. ಫಿರೋಜ್‌ಪುರ ಮಾತ್ರವಲ್ಲದೆ, ಜಲಂಧರ್, ಕಪುರ್ತಲಾ ಹಾಗೂ ರೂಪ್‌ನಗರ ಜಿಲ್ಲೆಗಳೂ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಗಳಿವೆ ಎಂದು ಭಾರತದ ಪಂಜಾಬ್ ರಾಜ್ಯ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಫಿರೋಜ್‌ಪುರ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಎಲ್ಲಾ ಹಳ್ಳಿಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಪ್ರಕಟಣೆ ಹೊರಡಿಸಿದೆ. ಪ್ರವಾಹ ಭೀತಿಯಿರುವ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ಇತರ ಸೇನಾ ತುಕಡಿಗಳನ್ನು ನಿಯೋಜಿಸಲಾಗಿದೆ. ಸದ್ಯಕ್ಕೆ ಯಾವುದೇ ಅಪಾಯವಿಲ್ಲ. ಆದರೆ ಪಾಕಿಸ್ತಾನ ಇನ್ನೂ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ದೆಹಲಿಯಲ್ಲಿ ಮಳೆ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2.4 ಮಿ.ಮೀನಷ್ಟು ಮಳೆಯಾಗಿದೆ. ದಿನದ ಉಷ್ಣಾಂಶ 26.8 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದು, ವಾತಾವರಣದಲ್ಲಿ ಶೇ. 97ರಷ್ಟು ತೇವಾಂಶವಿತ್ತು ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.