ಪಾಕ್ ಸೇನಾ ಬಂಕರ್ ಧ್ವಂಸ ಮಾಡಿದ ಸೇನೆ: ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದ ಪಾಕ್
Team Udayavani, Nov 14, 2020, 9:28 AM IST
ಹೊಸದಿಲ್ಲಿ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಯುದ್ದಕ್ಕೂ ಸತತವಾಗಿ ಅಪ್ರಚೋದಿತ ದಾಳಿ ನಡೆಸುತ್ತಾ ಬಂದ ಪಾಕಿಸ್ತಾನಕ್ಕೆ ಶುಕ್ರವಾರ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಪಡೆಯ ಕದನ ವಿರಾಮ ಉಲ್ಲಂಘನೆಗೆ ದಿಟ್ಟ ಉತ್ತರ ನೀಡಿರುವ ಯೋಧರು, ಪ್ರತಿದಾಳಿ ನಡೆಸಿ ಪಾಕಿಸ್ತಾನದ 11 ಸೈನಿಕರನ್ನು ಹತ್ಯೆಗೈದಿದ್ದಾರೆ. ಅಷ್ಟೇ ಅಲ್ಲ, ಎಲ್‌ಒಸಿಯುದ್ದಕ್ಕೂ ಇರುವ ಪಾಕಿಸ್ತಾನಿ ಸೇನೆಯ ಶಿಬಿರಗಳು ಹಾಗೂಬಂಕರ್‌ಗಳನ್ನೂ ಧ್ವಂಸಗೊಳಿಸಲಾಗಿದೆ.
ಆದರೆ ಪಾಕಿಸ್ಥಾನ ಮತ್ತೆ ವರಸೆ ತೋರಿಸಿದ್ದು, ಕೇವಲ ಒಬ್ಬ ಯೋಧ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದಿದೆ. ಅಲ್ಲದೆ ನಾಲ್ವರು ನಾಗರಿಕರು ಸಾವನ್ನಪ್ಪಿ, 12 ಮಂದಿ ಗಾಯಗೊಂಡಿದ್ದಾರೆಂದು ಪಾಕ್ ಹೇಳಿದೆ. ಅಷ್ಟೇ ಅಲ್ಲದೆ ಘಟನೆಯ ಕುರಿತಂತೆ ಪಾಕಿಸ್ಥಾನದಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಗುರೇಜ್‌ನಿಂದ ಉರಿ ವಲಯದವರೆಗೂ ಅಂದರೆ, ದಾವಾರ್, ಕೇರನ್, ಉರಿ, ನೌಗಾಮ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಏಕಾಏಕಿ ಪಾಕ್ ಸೇನೆ ಗುಂಡಿನ ಮಳೆಗರೆಯತೊಡಗಿತು. ಭಾರತೀಯ ಸೇನೆಯ ಮುಂಚೂಣಿ ನೆಲೆಗಳು ಹಾಗೂ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಶೆಲ್‌ಗಳು ತೂರಿ ಬಂದವು. ಈ ಅನಿರೀಕ್ಷಿತ ದಾಳಿಯಿಂದಾಗಿ ಬಿಎಸ್ ಎಫ್ ಸಬ್‌ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾದರು. ಜತೆಗೆ, 6 ಮಂದಿ ನಾಗರಿಕರು ಕೂಡ ಅಸುನೀಗಿದರು. ನಾಲ್ವರು ಯೋಧರು ಮತ್ತು 8 ನಾಗರಿಕರು ಗಾಯಗೊಂಡರು.
ಇದನ್ನೂ ಓದಿ:ಎಚ್ಚರ ವಹಿಸಿ: ಹಸಿರು ಪಟಾಕಿಯಿಂದಲೂ ಹಾನಿ ತಪ್ಪಿದ್ದಲ್ಲ!
ಪಾಕ್ ಪಡೆಯ ಈ ಕುಕೃತ್ಯದಿಂದ ಆಕ್ರೋಶಗೊಂಡ ಭಾರತೀಯ ಸೇನೆ, ಪ್ರಬಲ ಪ್ರತ್ಯುತ್ತರ ನೀಡಲಾರಂಭಿಸಿತು. ಪ್ರತಿದಾಳಿ ನಡೆಸಿ ಪಾಕಿಸ್ತಾನದ 11 ಸೈನಿಕರನ್ನು ಹತ್ಯೆಗೈದಿದ್ದಾರೆ. ಎಲ್‌ಒಸಿಯುದ್ದಕ್ಕೂ ಇರುವ ಪಾಕಿಸ್ತಾನಿ ಸೇನೆಯ ಶಿಬಿರಗಳು ಹಾಗೂ ಬಂಕರ್‌ಗಳನ್ನೂ ಧ್ವಂಸಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.