15 ದಿನಗಳೊಳಗೆ ಕಾಶ್ಮೀರ, ಪಂಜಾಬ್‌ನಲ್ಲಿ ಐಎಸ್‌ಐ ಉಗ್ರ ದಾಳಿ: ವರದಿ
Team Udayavani, Jun 10, 2017, 3:53 PM IST
ಹೊಸದಿಲ್ಲಿ : ಪಾಕಿಸ್ಥಾನದ ಬೇಹು ಸಂಸ್ಥೆ ಐಎಸ್‌ಐ ಜಮ್ಮು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ಭಾರೀ ದೊಡ್ಡ ಉಗ್ರ ದಾಳಿ ನಡೆಸಲು ಯೋಜಿಸುತ್ತಿದೆ; ಇದಕ್ಕಾಗಿ ನಾಲ್ವರು ಉಗ್ರರು ಪಂಜಾಬ್ ಗಡಿ ಮೂಲಕ ದೇಶದೊಳಗೆ ನುಸುಳಿ ಬಂದಿದ್ದಾರೆ ಎಂದು ಭಾರತೀಯ ಗುಪ್ತಚರ ದಳ, ರಾಜ್ಯ ಸರಕಾರಗಳೊಂದಿಗೆ ಹಂಚಿಕೊಂಡಿರುವ ವರದಿಯು ತಿಳಿಸಿದೆ.
ಮುಂದಿನ ಹದಿನೈದು ದಿನಗಳ ಒಳಗೆ ಜಮ್ಮು ಸಮೀಪದ ಕಥುವಾ, ಪಂಜಾಬ್ ನಲ್ಲಿನ ಗುರುದಾಸ್‌ಪುರ ಮತ್ತು ಪಠಾಣ್‌ಕೋಟ್‌ನಲ್ಲಿ ಪಾಕ್ ಐಎಸ್‌ಐ ಆಯೋಜಿತ ಉಗ್ರ ದಾಳಿಗಳು ನಡೆಯುವ ಸಂಭವವಿದೆ; ಈ ಬಗ್ಗೆ ಸಾಕಷ್ಟು ಮುಂಜಾಗ್ರತೆ ಅಗತ್ಯ ಎಂದು ಗುಪ್ತಚರ ವರದಿ ತಿಳಿಸಿದೆ. ಗುಪ್ತಚರ ದಳದ ಈ ವರದಿಯ ಪ್ರತಿಯೊಂದು ಐಎಎನ್‌ಎಸ್ ಸುದ್ದಿ ಸಂಸ್ಥೆಗೆ ದೊರಕಿದೆ.
ಕೆಲವು ದಿನಗಳ ನಾಲ್ಕು ಪಾಕ್ ಉಗ್ರರು ಪಂಜಾಬ್ ಗಡಿ ಮೂಲಕ ಬಮ್‌ತಾಲ್ ವಲಯದೊಳಗೆ ನುಸುಳಿ ಬಂದಿದ್ದಾರೆ; ಇವರು ಜಮ್ಮು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ಭಾರೀ ದೊಡ್ಡ ಉಗ್ರ ದಾಳಿಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ದಳ ಈ ವಾರದ ಆದಿಯಲ್ಲೇ ರಾಜ್ಯ ಸರಕಾರಗಳಿಗೆ ಮುನ್ನೆಚ್ಚರಿಕೆ ನೀಡಿದೆ.
ಪಂಜಾಬ್ ನಲ್ಲೀಗ ಅಡಗಿಕೊಂಡಿರುವ ಈ ಉಗ್ರರು ಪಾಕಿಸ್ಥಾನದಿಂದ ತಮಗೆ ಶಸ್ತ್ರಾಸ್ತ್ರಗಳು ಪೂರೈ ಕೆಯಾಗುವುದನ್ನೇ ಕಾಯುತ್ತಿದ್ದಾರೆ; ಮಾದಕ ದ್ರವ್ಯ ಕಳ್ಳಸಾಗಣೆದಾರನೋರ್ವನನ್ನು ಪಾಕ್ ಐಎಸ್‌ಐ ಕೊರಿಯರ್ ಆಗಿ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.