Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಬಾಂಬ್ ಇಟ್ಟಿರುವುದು ಕೇವಲ ವದಂತಿ; ಭದ್ರತಾ ವ್ಯವಸ್ಥೆಗೆ ಎಚ್ಚರಿಕೆ
Team Udayavani, May 1, 2024, 3:16 PM IST
ಪಣಜಿ: ದಾಬೋಲಿ ವಿಮಾನ ನಿಲ್ದಾಣದಲ್ಲಿ ‘ಬಾಂಬ್’ ಇರುವ ಕುರಿತು ಮಂಗಳವಾರ ಇ-ಮೇಲ್ ಬಂದ ನಂತರ ವಿಮಾನ ನಿಲ್ದಾಣ ಪ್ರಾಧಿಕಾರ ದೌಡಾಯಿಸಿದ್ದು, ಮೋಪಾ, ದಾಬೋಲಿ ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಗೆ ಕೂಡ ಎಚ್ಚರಿಕೆ ನೀಡಲಾಗಿದೆ. ಆದರೆ ನಂತರ ಬಾಂಬ್ ಇಟ್ಟಿರುವುದು ಕೇವಲ ವದಂತಿ ಎಂದು ತಿಳಿದುಬಂದಿದೆ.
ಬಾಂಬ್‍ಗೆ ಸಂಬಂಧಿಸಿದಂತೆ ಇ-ಮೇಲ್ ಬಂದಿರುವ ಮಾಹಿತಿಯನ್ನು ವಿಮಾನ ನಿಲ್ದಾಣದ ನಿರ್ದೇಶಕ ಧನಂಜಯ್ ರಾವ್ ಖಚಿತಪಡಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇ-ಮೇಲ್ ದಾಬೋಲಿ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಬಂದ ತಕ್ಷಣ ಭದ್ರತಾ ಪಡೆಗಳು ತಕ್ಷಣವೇ ಎಚ್ಚರಗೊಂಡವು.
ದೇಶದ 13 ವಿಮಾನ ನಿಲ್ದಾಣಗಳಿಗೂ ಇಂತಹ ಇ-ಮೇಲ್ ರವಾನೆಯಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.
ಭದ್ರತೆಗಾಗಿ ಶ್ವಾನ ದಳದೊಂದಿಗೆ ವಾಸ್ಕೋ ಪೊಲೀಸ್ ಇಲಾಖೆ, ಸಿಐಎಸ್‍ಎಫ್, ಎಟಿಎಸ್, ಅಗ್ನಿಶಾಮಕ ದಳ ಮತ್ತು ಇತರ ಏಜೆನ್ಸಿಗಳ ನೂರಕ್ಕೂ ಹೆಚ್ಚು ಸಿಬ್ಬಂದಿಯಿಂದ ಸಂಪೂರ್ಣ ಶೋಧ ನಡೆಸಲಾಯಿತು.
ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದರೂ, ವಿಮಾನಗಳ ಓಡಾಟಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ವಿಮಾನ ನಿಲ್ದಾಣ ನಿರ್ದೇಶಕ ಧನಂಜಯ್ ರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.