Panaji: ಅನುಚಿತವಾಗಿ ವರ್ತಿಸುವ ಮತ್ತು ದಾರಿ ತಪ್ಪಿಸುವವರ ವಿರುದ್ಧ ಕಠಿಣ ಕ್ರಮ
Team Udayavani, Oct 5, 2023, 3:25 PM IST
ಪಣಜಿ : ಸಮಾಜದಲ್ಲಿ ಧಾರ್ಮಿಕ ವೈಷಮ್ಯ ಸೃಷ್ಟಿಸುವ ಉದ್ದೇಶದಿಂದ ಕೆಲವು ಸಮಾಜಘಾತುಕರು ಸಾಮಾಜಿಕ ಜಾಲತಾಣಗಳನ್ನು ಬಳಸಿ ಆಕ್ಷೇಪಾರ್ಹ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ವಿಚಾರಗಳನ್ನು ಪೊಲೀಸ್ ಇಲಾಖೆಯಿಂದ ಪ್ರತಿನಿತ್ಯ ಗಮನಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಆದ್ದರಿಂದ ಸಾರ್ವಜನಿಕರು ಇಂತಹ ದಾರಿ ತಪ್ಪಿಸುವ ವಿಚಾರಗಳಿಗೆ ಬಲಿಯಾಗಬಾರದು. ಅನುಚಿತವಾಗಿ ವರ್ತಿಸುವ ಮತ್ತು ದಾರಿ ತಪ್ಪಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೋವಾ ರಾಜ್ಯ ಪೊಲೀಸ್ ಮಹಾನಿರ್ದೇಶಕ ಜಸ್ಪಾಲ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜನರು ಇಂತಹದ್ದಕ್ಕೆ ಬಲಿಯಾಗಿ ಮತ್ತೊಂದು ಪೋಸ್ಟ್ ಅನ್ನು ಪೋಸ್ಟ್ ಮಾಡಿದರೆ ಅಥವಾ ಅದನ್ನು ಬೆಂಬಲಿಸಲು ಪ್ರತಿಭಟನೆ ಮಾಡಿದರೆ ಈ ಸಮಾಜವಿರೋಧಿಗಳು ತಮ್ಮ ಉದ್ದೇಶಗಳಲ್ಲಿ ಯಶಸ್ವಿಯಾಗುತ್ತಾರೆ. ಅದನ್ನೇ ಅವರು ಬಯಸುತ್ತಾರೆ. ಇಂತಹ ಸಮಾಜಘಾತುಕರನ್ನು ಬಂಧಿಸಲು ಜನರು ಪೊಲೀಸರೊಂದಿಗೆ ಸಹಕರಿಸಬೇಕು. ಅಂತಹ ಪ್ರಕರಣದ ತನಿಖೆಯನ್ನು ಅತ್ಯಂತ ಗೌಪ್ಯ ಮತ್ತು ತಾಂತ್ರಿಕ ರೀತಿಯಲ್ಲಿ ಮಾಡಲಾಗುತ್ತದೆ ಎಂದು ಜಸ್ಪಾಲ್ ಸಿಂಗ್ ಹೇಳಿದರು.
ಸಮಾಜದಲ್ಲಿ ಧಾರ್ಮಿಕ ಭಿನ್ನಾಭಿಪ್ರಾಯ ತಲೆದೋರಿರುವ ಬೆನ್ನಲ್ಲೇ ಕೆಲ ಸಾಮಾಜಿಕ ಕಾರ್ಯಕರ್ತರು ಹಳೇ ಪೋಸ್ಟ್ ಗಳನ್ನು ಬಳಸಿ ಅದಕ್ಕೆ ಕಿಚ್ಚು ಹಚ್ಚುತ್ತಿರುವುದು ಬೆಳಕಿಗೆ ಬಂದಿದೆ. ಇಂತಹ ಹಳೆಯ ಪೋಸ್ಟ್ ಗಳಿಂದ ಸಾರ್ವಜನಿಕರ ಭಾವನೆಗಳನ್ನು ಕೆರಳಿಸಲಾಗುತ್ತಿದೆ. ಜನರು ಇದರ ಬಗ್ಗೆ ಎಚ್ಚರದಿಂದಿರಬೇಕು. ಅಂತಹ ಪೋಸ್ಟ್ ಗಳಿಗೆ ಪ್ರತಿಕ್ರಿಯಿಸುವ ಬದಲು, ಅಂತಹ ಘಟನೆಗಳ ಬಗ್ಗೆ ಪೊಲೀಸರಿಗೆ ವರದಿ ಮಾಡಬೇಕು ಎಂದು ಪೋಲಿಸ್ ಮಹಾ ನಿರ್ದೇಶಕ ಜಸ್ಪಾಲ್ ಸಿಂಗ್ ಜನತೆಯ ಬಳಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.