Panaji: ವಾಹನ ಕಳ್ಳತನ: ಇಬ್ಬರ ಬಂಧನ
Team Udayavani, Nov 18, 2023, 1:28 PM IST
ಪಣಜಿ: ಮನೆ ಬೀಗ ಒಡೆದು ವಾಹನ ಕಳ್ಳತನ ಮಾಡಿದ ಪ್ರಕರಣದಲ್ಲಿ ಗೋವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಶಂಕಿತ ಆರೋಪಿಗಳಲ್ಲಿ ರಾಷ್ಟ್ರೀಯ ಮಟ್ಟದ ಸ್ನೂಕರ್ ಆಟಗಾರನೂ ಸೇರಿದ್ದಾನೆ. ಇವರಿಬ್ಬರೂ ಕಳ್ಳತನ ಹಾಗೂ ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಗೋವಾ ಪೊಲೀಸ್ ವರಿಷ್ಠಾಧಿಕಾರಿ ನಿಧಿನ್ ವಲ್ಸನ್ ನೀಡಿರುವ ಮಾಹಿತಿಯ ಪ್ರಕಾರ, ಸ್ನೂಕರ್ ಆಟಗಾರ ಇತ್ತೀಚೆಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಸ್ನೂಕರ್ ಆಟಗಾರ ಸುಲೇಮಾನ್ ಶೇಖ್ ಮತ್ತು ಅವರ ಪಾಲುದಾರ ಶಬ್ಬೀರ್ಸಾಹೇಬ್ ಶಲವಾದಿ ಅವರನ್ನು ಅವರ ಮನೆಯಿಂದ ಬಂಧಿಸಲಾಗಿದೆ. ಈತನ ಮೇಲೆ ಕಳ್ಳತನ ಮತ್ತು ವಾಹನ ಕಳ್ಳತನದ ಆರೋಪವಿದೆ. ಸುಲೈಮಾನ್ ಶೇಖ್ 2023 ರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಗೋವಾವನ್ನು ಪ್ರತಿನಿಧಿಸಿದ್ದರು. ಇಬ್ಬರೂ ಕ್ಯಾಸಿನೊಗಳಿಗೆ ವ್ಯಸನಿಯಾಗಿದ್ದರು, ಆದ್ದರಿಂದ ಅವರು ಅಪರಾಧದ ಹಾದಿಯನ್ನು ಆರಿಸಿಕೊಂಡರು ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಶಂಕಿತ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ಉತ್ತರ ಗೋವಾದ ಪರ್ವರಿಯಲ್ಲಿ ಎರಡು ಕಳ್ಳತನ, ಮಾಪಸಾ ಮತ್ತು ಮರ್ಡೋಲ್‍ನಲ್ಲಿ ತಲಾ ಒಂದು ಮತ್ತು ದಕ್ಷಿಣ ಗೋವಾದ ಮಡಗಾಂವ್‍ನಲ್ಲಿ ಮೋಟಾರ್‍ಸೈಕಲ್ ಕಳ್ಳತನ ಪ್ರಕರಣಗಳು ದಾಖಲಾಗಿವೆ.
17 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಕನಿಷ್ಠ 50 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ನಂತರ ಆರೋಪಿಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.