ಗೋವಾದಲ್ಲಿ ಬೆಳಗಾಯಿತೆಂದರೆ ಚಟುವಟಿಕೆ ನಡೆಸಲು ಕನ್ನಡಿಗರೇ ಬೇಕು: ಪಂಚಮಸಾಲಿ ಶ್ರೀ
ಎರಡೂ ರಾಜ್ಯದ ಮುಖ್ಯಮಂತ್ರಿಗಳು ಸೇರಿ ಮಹದಾಯಿ ನೀರಿನ ಸಮಸ್ಯೆ ಬಗೆಹರಿಸಲಿ
Team Udayavani, Jul 2, 2023, 6:36 PM IST
ಪಣಜಿ: ಮಹದಾಯಿ ನದಿ ನೀರಿನ ಸಮಸ್ಯೆಯನ್ನು ನ್ಯಾಯಾಧೀಕರಣದ ಹೊರಗೆ ಕರ್ನಾಟಕ ಮತ್ತು ಗೋವಾ ಈ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ನಡೆಸಿ ನೀರು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ನಿಮಗೆ ನಾವು ಬೇಕು ನಮಗೆ ನೀವು ಬೇಕು ಈ ಭಾವನೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇಂತಹ ಭೌಗೋಳಿಕ ಸಂಬಂಧ ಈ ಹಿಂದಿನಿಂದ ಇದೆ. ಗೋವಾದಲ್ಲಿ ಬೆಳಗಾಯಿತೆಂದರೆ ಚಟುವಟಿಕೆ ನಡೆಯಬೇಕಾದರೆ ಕನ್ನಡಿಗರೇ ಬೇಕು ಎಂದು ಪಂಚಮಸಾಲಿ ಪೀಠಾಧ್ಯಕ್ಷರಾದ ಕೂಡಲಸಂಗಮದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ನುಡಿದರು.
ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡುತ್ತಿದ್ದರು.
ಮಹದಾಯಿ ನದಿಯ ಒಂದು ಕೊಡದ ನೀರಿನಲ್ಲಿ ಕರ್ನಾಟಕ ಕೇಳಿರುವುದು ಕೇವಲ ಒಂದು ಲೋಟ ನೀರು ಮಾತ್ರ. ಒಂದು ಲೋಟ ನೀರನ್ನು ನಮ್ಮ ಬಾಗಲಕೋಟೆ, ಗದಗ ಜಿಲ್ಲೆ, ಬೆಳಗಾವಿ ಜಿಲ್ಲೆ, ಸೇರಿದಂತೆ ಉತ್ತರ ಕರ್ನಾಟಕಕ್ಕೆ ಕುಡಿಯುವ ನೀರು ಪೂರೈಸಬೇಕು ಎಂಬುದು ನಮ್ಮ ಆಶಯ. 3.5 ಟಿಎಂಸಿ ನೀರನ್ನು ಕರ್ನಾಟಕಕ್ಕೆ ನೀಡಬೇಕು ಎಂದು ನ್ಯಾಯಾಧೀಕರಣ ಹೇಳಿದೆ. 40 ವರ್ಷದ ಈ ಪ್ರಕರಣದಲ್ಲಿ ಕೋರ್ಟ್ ಕಛೇರಿ ಎಂದು ಹೇಳುತ್ತ ರಾಜಕಾರಣ ಮಾಡುವುದಕ್ಕಿಂತ ಕೂಡಲೇ ಎರಡೂ ಸರ್ಕಾರದ ಮುಖ್ಯಮಂತ್ರಿಗಳು ಒಂದು ಸಂಧಾನ ರೀತಿಯಲ್ಲಿ, ನ್ಯಾಯಾಧೀಕರಣದ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎರಡೂ ರಾಜ್ಯಗಳ ಪರಿಸರವಾಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಂಡು ಮಹದಾಯಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶ್ರೀ ಜಯಮೃತ್ಯುಂಜಯಸ್ವಾಮೀಜಿ ನುಡಿದರು.
ಗೋವಾ ಕನ್ನಡಿಗರ ಮನೆ ತೆರವುಗೊಳಿದ್ದ ಸಂದರ್ಭದಲ್ಲಿ ಕರ್ನಾಟಕದ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿ ಈ ನಿರಾಶ್ರಿತ ಕನ್ನಡಿಗರಿಗೆ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆಯೇ ಗೋವಾದ ಅಂದಿನ ಮುಖ್ಯಮಂತ್ರಿ ಮನೋಹರ್ ಪರೀಕರ್ ರವರನ್ನು ಕೂಡ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಅಂದು ಕರ್ನಾಟಕ ಸರ್ಕಾರ ಇಲ್ಲಿನ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಿಕೊಡಲು ಮುಂದಾಗಿತ್ತು, ಆದರೆ ಕಾರಣಾಂತರಗಳಿಂದ ಅಂದು ನಂತರ ಅದು ಸಾಧ್ಯವಾಗಿಲ್ಲ. ಆದರೆ ಇಂದು ಸಿದ್ಧರಾಮಯ್ಯ ರವರೇ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾರೆ.
ಇದರಿಂದಾಗಿ ಇದೀಗ ಮತ್ತೆ ಇಲ್ಲಿನ ನಿರಾಶ್ರಿಕ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಿಕೊಡಲು ಮನವಿ ಮಾಡಲಾಗುವುದು. ಗೋವಾದಲ್ಲಿ ಕಡಿನಾಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಡಿನಾಡಲ್ಲಿ ಬಂದು ಇಲ್ಲಿಯೇ ಕನ್ನಡಿಗರ ಪರ ಹೋರಾಟ ನಡೆಸುತ್ತಿರುವ ಸಿದ್ಧಣ್ಣ ಮೇಟಿ ರವರನ್ನು ಗಡಿನಾಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನುಡಿದರು.
ಈ ಸಂದರ್ಭದಲ್ಲಿ ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ರಾಗಿಣಿ ಸಂಗೀತ ನೃತ್ಯಾಲಯ ಬೆಂಗಳೂರು ತಂಡ, ಪಿ ಎಂಡ್ ಪಿ ಡಾನ್ಸ ಅಕಾಡಮಿ ಮಡಗಾಂವ ಗೋವಾ, ಮಧುರ ಮಧುರವಿ ಮಂಜುಳಗಾನ ತಂಡದಿಂದ ಗಾಯನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಪತ್ರಕರ್ತ ಮಾರುತಿ ಬಡಿಗೇರ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು, ಶೀಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು. ಗೋವಾ ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: Bidar; ಮದುವೆಯಾದ ಎರಡೇ ದಿನಕ್ಕೆ ಯುವಕ ರಸ್ತೆ ಅಪಘಾತದಲ್ಲಿ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.