ಪಂಡಿತರ ಲೆಕ್ಕಾಚಾರವೇ ಬುಡಮೇಲು

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

Team Udayavani, May 28, 2019, 6:00 AM IST

w-40

ವಾರಾಣಸಿಯ ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

ವಾರಾಣಸಿ: ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಜನರ ಕೆಮಿಸ್ಟ್ರಿ ಬುಡಮೇಲು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೋಮವಾರ ತಮ್ಮ ಕ್ಷೇತ್ರವಾದ ವಾರಾಣಸಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, 2019ರ ಲೋಕಸಭೆ ಚುನಾವಣೆಯಲ್ಲಿ ರಾಜ ಕೀಯ ಪಂಡಿತರ ಅಂಕಿಸಂಖ್ಯೆಯನ್ನು ಜನರ ಕೆಮಿಸ್ಟ್ರಿ ಸೋಲಿಸಿದೆ. ಇಷ್ಟಾದರೂ ರಾಜಕೀಯ ಪಂಡಿತರು ಕಣ್ಣು ಮುಚ್ಚಿ ಕುಳಿತಿದ್ದರೆ, ಅವರು ಇನ್ನೂ 20ನೇ ಶತಮಾನದ ಲ್ಲಿದ್ದಾರೆ ಎಂದೇ ಅರ್ಥ ಎಂದು ಹೇಳಿದ್ದಾರೆ. ಜತೆಗೆ, ಈ ಚುನಾವಣೆಯಲ್ಲಿ ರಾಜಕೀಯ ಅಸ್ಪೃಶ್ಯತೆ ಮತ್ತು ಹಿಂಸೆಯನ್ನೂ ನಾವು ಎದುರಿಸಬೇಕಾಯಿತು ಎಂದೂ ಮೋದಿ ಹೇಳಿದ್ದಾರೆ. ಎರಡನೇ ಬಾರಿಗೆ ಲೋಕಸಭೆಗೆ ಆರಿಸಿ ಕಳುಹಿಸಿದ ವಾರಾಣಸಿಯ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಧನ್ಯವಾದ ಅರ್ಪಿಸಿ ದ್ದಾರೆ. ರವಿವಾರ ಸಂಜೆ ಗುಜರಾತ್‌ಗೆ ತೆರಳಿ ತಾಯಿಯ ಆಶೀರ್ವಾದ ಪಡೆದ ಮೋದಿ, ಸೋಮವಾರ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ, ಕೆಲವು ರಾಜ್ಯಗಳಲ್ಲಿ ನಮ್ಮ ನೂರಾರು ಕಾರ್ಯ ಕರ್ತರನ್ನು ಅವರ ರಾಜಕೀಯ ನಿಲುವುಗಳ ಕಾರಣದಿಂದ ಹತ್ಯೆಗೈಯಲಾಗಿದೆ. ದಿನದಿಂದ ದಿನಕ್ಕೆ ರಾಜಕೀಯ ಅಸ್ಪೃಶ್ಯತೆ ಹೆಚುತ್ತಿದೆ. ಕೆಲವು ಕಡೆಗಳಲ್ಲಂತೂ ಬಿಜೆಪಿಯ ಹೆಸರು ಕೇಳಿದರೇ ಅಸ್ಪೃಶ್ಯತೆಯ ವಾತಾವರಣ ನಿರ್ಮಾಣವಾಗುತ್ತದೆ. ಕಾಶ್ಮೀರ, ಕೇರಳ ಮತ್ತು ಪ.ಬಂಗಾಲದಲ್ಲಿ ಯಾಕೆ ನಮ್ಮ ಕಾರ್ಯಕರ್ತರ ಮೇಲೆ ದಾಳಿ ಅಥವಾ ಹತ್ಯೆ ನಡೆಯುತ್ತದೆ? ಇದು ನಾಚಿಕೆಗೇಡು ಮತ್ತು ಪ್ರಜಾಪ್ರಭುತ್ವ ವಿರೋಧಿ. ಪ್ರಸ್ತುತ ಸನ್ನಿವೇಶದಲ್ಲಿ ಪ್ರಜಾಪ್ರಭುತ್ವವನ್ನು ಪ್ರತಿ ಉಸಿರಿನಲ್ಲೂ ಹೊತ್ತಿರುವುದು ನಮ್ಮ ಪಕ್ಷ ಮಾತ್ರ ಎಂದು ಮೋದಿ ಹೇಳಿದ್ದಾರೆ.

ವಾರಾಣಸಿಯ ಜನರನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶಕ್ಕೆ ನಾನು ಪ್ರಧಾನಿಯಾಗಿರಬಹುದು, ಆದರೆ ನಿಮಗೆ ನಾನು ಸಂಸದ. ನಿಮ್ಮ ಸೇವಕ. ನನ್ನ ಈ ಗೆಲುವಿಗೆ ಕಾರ್ಯಕರ್ತರ ಶ್ರಮವೇ ಮುಖ್ಯ. ಬೇರು ಮಟ್ಟ ದಲ್ಲಿ ಕೆಲಸ ಮಾಡಿದವರು ಜನರಲ್ಲಿ ಸರಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ ಎಂದಿದ್ದಾರೆ.

ಕಾಶಿ ವಿಶ್ವನಾಥನಿಗೆ ನಮನ: ಸೋಮವಾರ ಕಾಶಿಗೆ ಆಗಮಿಸಿದ ಪ್ರಧಾನಿ ಮೋದಿ ಜೊತೆಗೆ ಪಕ್ಷದ ಅಧ್ಯಕ್ಷ ಅಮಿತ್‌ ಶಾ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಕೂಡ ಇದ್ದರು. ವಿಮಾನ ನಿಲ್ದಾಣದಿಂದ ಕಾಪ್ಟರ್‌ ಮೂಲಕ ಆಗಮಿಸಿದ್ದ ಮೋದಿ, ಬನ್ಸ್‌ಪಾಠಕ್‌ಗೆ ರಸ್ತೆ ಮಾರ್ಗವಾಗಿ ದೇಗುಲಕ್ಕೆ ಆಗಮಿಸಿದ್ದರು. ಈ ವೇಳೆ ದಾರಿಗುಂಟ ಮೋದಿ ವೀಕ್ಷಿಸಲು ಜನರು ಸೇರಿದ್ದರು. ಮೋದಿಯನ್ನು ಪುಷ್ಪಾರ್ಚನೆ ಮೂಲಕ ಕಾಶಿ ಜನರು ಸ್ವಾಗತಿಸಿದರು. ಇದೊಂದು ಚುನಾವಣಾ ರ್ಯಾಲಿಯಂತೆಯೇ ಕಾಣುತ್ತಿತ್ತು.

ದೇಗುಲಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ನಂತರ ಮೋದಿ, ಇಲ್ಲಿನ ದೇಗುಲದ ಅಭಿವೃದ್ಧಿ ಕಾಮಗಾರಿಗಳ ಮರು ಪರಿಶೀಲನೆಯನ್ನೂ ಮಾಡಿದರು. ಮೋದಿ ಆಗಮನಕ್ಕೂ ಮುನ್ನವೇ ಸಿಎಂ ಯೋಗಿ ಆದಿತ್ಯನಾಥ ಭಾರಿ ಸಿದ್ಧತೆ ನಡೆಸಿದ್ದರು. ಇಡೀ ನಗರವನ್ನು ಸ್ವಚ್ಛಗೊಳಿಸಲಾಗಿತ್ತು. ಅಷ್ಟೇ ಅಲ್ಲ, ನಗರದ ಎಲ್ಲೆಡೆ ಬಿಜೆಪಿಯ ಬಾವುಟಗಳು ರಾರಾಜಿಸುತ್ತಿದ್ದವು.

ಕಾಶಿಯನ್ನು ಮೋದಿ ರೂಪಾಂತರಿಸಿದ್ದಾರೆ: ಶಾ
ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ವಾರಾಣಸಿಯನ್ನು ರೂಪಾಂತರಗೊಳಿಸಿದ್ದಾರೆ ಎಂದು ಶಾ ಹೇಳಿದ್ದಾರೆ. ಜನರು ಮೋದಿಯನ್ನು ಬೆಂಬಲಿಸಿದ್ದಕ್ಕೆ ಹಾಗೂ ಪುನಃ ಆಯ್ಕೆ ಮಾಡಿದ್ದಕ್ಕೆ ಜನರನ್ನು ಶಾ ವಂದಿಸಿದ್ದಾರೆ. ಲೋಕಸಭೆಯಲ್ಲಿ ಮೋದಿಯಂತಹವರಿಂದ ಪ್ರತಿನಿಧಿಸಲ್ಪಡುತ್ತಿರುವುದು ವಾರಾಣಸಿ ಜನರ ಅದೃಷ್ಟ. ಬಹುಶಃ ನಾಮಪತ್ರ ಸಲ್ಲಿಸಿದ ನಂತರ ಮೋದಿ ಕ್ಷೇತ್ರಕ್ಕೆ ಭೇಟಿ ನೀಡದಿದ್ದರೂ ಜನರು ಗೆಲ್ಲಿಸಿದ್ದಾರೆ. ಇದು ಜನರಲ್ಲಿ ಮೋದಿ ಬಗ್ಗೆ ಇರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಶಾ ಹೇಳಿದ್ದಾರೆ.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.