ತಮಿಳುನಾಡಿನಲ್ಲಿ ಬಿಜೆಪಿ ಜತೆ ಪನ್ನೀರ್ ಬಣ ಹೊಂದಾಣಿಕೆ?
Team Udayavani, May 21, 2017, 11:14 AM IST
ಹೊಸದಿಲ್ಲಿ: ಸೂಪರ್ಸ್ಟಾರ್ ರಜನೀಕಾಂತ್ ರಾಜಕೀಯಕ್ಕೆ ಬರುತ್ತಾರೋ ಇಲ್ಲವೋ ಎಂಬ ಸುದ್ದಿ ತಮಿಳಿನಾಡಿನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವಾಗಲೇ, ಮಾಜಿ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಹಣ್ತೀದ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಮುಂದೆ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪನ್ನೀರ್ ಬಣ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಪನ್ನೀರ್ಸೆಲ್ವಂ ಟ್ವೀಟ್ ಮಾಡಿದ್ದು, “ಸ್ಥಳೀಯ ಸಂಸ್ಥೆ ಚುನಾವಣೆ ಅಧಿಕೃತವಾಗಿ ಘೋಷಣೆಯಾದ ಬಳಿಕ ಬಿಜೆಪಿ ಜತೆ ಮೈತ್ರಿ ಮಾಡುವ ಬಗ್ಗೆ ನಿರ್ಧರಿಸುತ್ತೇವೆ’ಎಂದು ಹೇಳಿದ್ದಾರೆ.
ಸೆಲ್ವಂ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದ್ದು, ಇದನ್ನು ಮುಂದಿನ ರಾಜಕೀಯ ಬದಲಾವಣೆಗೆ ಹಿಡಿದ ಕನ್ನಡಿ ಎಂದು ವಿಶ್ಲೇಷಿಸಲಾಗುತ್ತಿದೆ. ಟ್ವೀಟ್ ಬೆನ್ನಲ್ಲೇ ಅದನ್ನು ತೆಗೆದುಹಾಕಿ, ಸ್ಪಷ್ಟನೆ ನೀಡಿರುವ ಅವರ ಮಾಧ್ಯಮ ತಂಡ, “ಮೈತ್ರಿಯು ಪರಿಸ್ಥಿತಿಗೆ ಅನುಗುಣವಾಗಿ ಯಾವ ಪಕ್ಷದೊಂದಿಗೂ ಆಗಬಹುದು. ಈಗಲೇ ಅದನ್ನು ಹೇಳಲಾಗದು’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.